NCBS Recruitment 2022: ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (National Centre For Biological Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಡಿಸೆಂಬರ್ 20, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ |
ಹುದ್ದೆ | ಪ್ರಾಜೆಕ್ಟ್ ಅಸೋಸಿಯೇಟ್-I |
ಒಟ್ಟು ಹುದ್ದೆ | 1 |
ವೇತನ | ಮಾಸಿಕ ₹ 25,000-31,000 |
ಉದ್ಯೋಗದ ಸ್ಥಳ | ಬೆಂಗಳೂರು |
ವಯೋಮಿತಿ:
ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.
ಇದನ್ನೂ ಓದಿ: BHEL ಮಲ್ಲೇಶ್ವರಂನಲ್ಲಿ Part Time ಹುದ್ದೆ ಖಾಲಿ ಇದೆ- ವಾರ್ಷಿಕ ಪ್ಯಾಕೇಜ್ 6 ಲಕ್ಷ
ವೇತನ:
ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 25,000-31,000 ವೇತನ ನೀಡಲಾಗುತ್ತದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 20/12/2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ