NCCS Recruitment 2023: ನ್ಯಾಷನಲ್ ಸೆಂಟರ್ ಫಾರ್ ಕಮ್ಯುನಿಕೇಶನ್ ಸೆಕ್ಯುರಿಟಿಯು (National Centre for Communication Security) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 19, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿದ್ದರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನ್ಯಾಷನಲ್ ಸೆಂಟರ್ ಫಾರ್ ಕಮ್ಯುನಿಕೇಶನ್ ಸೆಕ್ಯುರಿಟಿ |
ಹುದ್ದೆ | ಕನ್ಸಲ್ಟೆಂಟ್ |
ಒಟ್ಟು ಹುದ್ದೆ | 3 |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜೂನ್ 19, 2023 |
ಇದನ್ನೂ ಓದಿ: Government Job: ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿಯಲ್ಲಿ 260 ಹುದ್ದೆಗಳ ಭರ್ತಿ- ತಿಂಗಳಿಗೆ 1.80 ಲಕ್ಷ ಸಂಬಳ
ವೇತನ:
ಅಭ್ಯರ್ಥಿಗಳ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ನ್ಯಾಷನಲ್ ಸೆಂಟರ್ ಫಾರ್ ಕಮ್ಯುನಿಕೇಶನ್ ಸೆಕ್ಯುರಿಟಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಆಫ್‌ಲೈನ್‌ನಲ್ಲಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ನಿರ್ದೇಶಕರು (HQ)
O/o Sr DDG
NCCS
DoT
3 ನೇ ಮಹಡಿ
ಸಿಟಿ ಟೆಲಿಫೋನ್ ಎಕ್ಸ್ಚೇಂಜ್
ಸಂಪಂಗಿ ರಾಮನಗರ
ಬೆಂಗಳೂರು - 560027
ಇದನ್ನೂ ಓದಿ: KMFನಲ್ಲಿ ಭರ್ಜರಿ ನೇಮಕಾತಿ- 219 ಹುದ್ದೆಗಳ ಭರ್ತಿಗೆ ಜೂನ್ 6 ವರೆಗೆ ಅವಕಾಶ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 19, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ