NHPC Recruitment 2023: ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್(National Hydro Electric Power Corporation -NHPC) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 401 ಟ್ರೈನಿ ಎಂಜಿನಿಯರ್, ಟ್ರೈನಿ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಜನವರಿ 25, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಹಾಕಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ |
ಹುದ್ದೆ | ಟ್ರೈನಿ ಎಂಜಿನಿಯರ್, ಟ್ರೈನಿ ಆಫೀಸರ್ |
ಒಟ್ಟು ಹುದ್ದೆ | 401 |
ವೇತನ | 50,000-1,60,000 |
ಉದ್ಯೋಗದ ಸ್ಥಳ | ಭಾರತ |
ವಿದ್ಯಾರ್ಹತೆ:
ಟ್ರೈನಿ ಎಂಜಿನಿಯರ್ (ಸಿವಿಲ್)- ಬಿಎಸ್ಸಿ, ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್
ಟ್ರೈನಿ ಎಂಜಿನಿಯರ್ (ಎಲೆಕ್ಟ್ರಿಕಲ್)- ಬಿಎಸ್ಸಿ, ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಪವರ್ ಸಿಸ್ಟಮ್ಸ್ ಮತ್ತು ಹೈವೋಲ್ಟೇಜ್/ಪವರ್ ಇಂಜಿನಿಯರಿಂಗ್ನಲ್ಲಿ ಬಿ.ಇ ಅಥವಾ ಬಿ.ಟೆಕ್
ಟ್ರೈನಿ ಎಂಜಿನಿಯರ್ (ಮೆಕ್ಯಾನಿಕಲ್)- ಬಿಎಸ್ಸಿ, ಮೆಕ್ಯಾನಿಕಲ್/ಪ್ರೊಡಕ್ಷನ್/ಥರ್ಮಲ್/ಮೆಕ್ಯಾನಿಕಲ್ ಮತ್ತು ಆಟೋಮೇಷನ್ ಎಂಜಿನಿಯರಿಂಗ್ನಲ್ಲಿ ಬಿ.ಇ ಅಥವಾ ಬಿ.ಟೆಕ್
ಟ್ರೈನಿ ಆಫೀಸರ್ (ಫೈನಾನ್ಸ್)- CA ಅಥವಾ ICWA, CMA, ಕಾಸ್ಟ್ ಅಕೌಂಟೆಂಟ್, ಪದವಿ
ಟ್ರೈನಿ ಆಫೀಸರ್ (ಹೆಚ್ಆರ್)- ಸ್ನಾತಕೋತ್ತರ ಪದವಿ, MBA, ಸೋಷಿಯಲ್ ವರ್ಕರ್ನಲ್ಲಿ ಸ್ನಾತಕೋತ್ತರ, ಮಾನವ ಸಂಪನ್ಮೂಲದಲ್ಲಿ ಸ್ನಾತಕೋತ್ತರ, ಸ್ನಾತಕೋತ್ತರ ಪದವಿ
ಟ್ರೈನಿ ಆಫೀಸರ್ (ಲಾ)- ಪದವಿ, ಕಾನೂನಿನಲ್ಲಿ ಪದವಿ, LLB
ಇದನ್ನೂ ಓದಿ: NLSIU Recruitment 2023: ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕೆಲಸ ಖಾಲಿ ಇದೆ
ವಯೋಮಿತಿ:
ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 25, 2023ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ(NCL) ಅಭ್ಯರ್ಥಿಗಳು-3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD (ಜನರಲ್) ಅಭ್ಯರ್ಥಿಗಳು- 10 ವರ್ಷ
PWD (ಒಬಿಸಿ/ NCL) ಅಭ್ಯರ್ಥಿಗಳು- 13 ವರ್ಷ
PWD (SC/ST) ಅಭ್ಯರ್ಥಿಗಳು- 15 ವರ್ಷ
ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 50,000-1,60,000 ರೂ. ವರೆಗೆ ವೇತನ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ.
ಅರ್ಜಿ ಶುಲ್ಕ:
SC/ST/PWD/ಮಾಜಿ ಸೈನಿಕ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಸಾಮಾನ್ಯ/EWS/OBC ಅಭ್ಯರ್ಥಿಗಳು- 295 ರೂ.
ಪಾವತಿಸುವ ಬಗೆ- ಆನ್ಲೈನ್
ಇದನ್ನೂ ಓದಿ: ADA Recruitment 2023: ತಿಂಗಳಿಗೆ 81,000 ಸಂಬಳ- ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿಯಲ್ಲಿ ಕೆಲಸ
ಆಯ್ಕೆ ಪ್ರಕ್ರಿಯೆ:
ಗೇಟ್ ಮಾರ್ಕ್ಸ್
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: 25/01/2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ