• Home
  • »
  • News
  • »
  • jobs
  • »
  • NIMHANS Recruitment 2022: ಮಾಸಿಕ ವೇತನ ₹ 51,000- ಬೆಂಗಳೂರಿನಲ್ಲಿ ಸೈಂಟಿಸ್ಟ್​ C ಹುದ್ದೆಗೆ ಈಗಲೇ ಅರ್ಜಿ ಹಾಕಿ

NIMHANS Recruitment 2022: ಮಾಸಿಕ ವೇತನ ₹ 51,000- ಬೆಂಗಳೂರಿನಲ್ಲಿ ಸೈಂಟಿಸ್ಟ್​ C ಹುದ್ದೆಗೆ ಈಗಲೇ ಅರ್ಜಿ ಹಾಕಿ

ನಿಮ್ಹಾನ್ಸ್​

ನಿಮ್ಹಾನ್ಸ್​

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ virologyvacancies@gmail.com ಗೆ ಡಿಸೆಂಬರ್ 22,2022ಕ್ಕೆ ಮುನ್ನ ಕಳುಹಿಸಬೇಕು.

  • Share this:

    NIMHANS Recruitment 2022: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೈಂಟಿಸ್ಟ್ ಸಿ (Non-Medical)​ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 22, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು
    ಹುದ್ದೆಸೈಂಟಿಸ್ಟ್ ಸಿ
    ಒಟ್ಟು ಹುದ್ದೆ1
    ಉದ್ಯೋಗದ ಸ್ಥಳಬೆಂಗಳೂರು
    ವೇತನಮಾಸಿಕ ₹51,000

    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಸೈಂಟಿಸ್ಟ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಎಸ್ಸಿ, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.


    ವಯೋಮಿತಿ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಸೈಂಟಿಸ್ಟ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.


    ಇದನ್ನೂ ಓದಿ: UAS Dharwad Recruitment 2022: ವಿಜಯಪುರದಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ 31,000 ಸಂಬಳ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ virologyvacancies@gmail.com ಗೆ ಡಿಸೆಂಬರ್ 22,2022ಕ್ಕೆ ಮುನ್ನ ಕಳುಹಿಸಬೇಕು.


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 08/12/2022
    ಇ-ಮೇಲ್ ಕಳುಹಿಸಲು ಕೊನೆ ದಿನ: 22/12/2022

    Published by:Latha CG
    First published: