• Home
  • »
  • News
  • »
  • jobs
  • »
  • ನಿಮ್ಹಾನ್ಸ್​ನಲ್ಲಿ MD ಆದವರಿಗೆ ಬಂಪರ್ ಉದ್ಯೋಗ-1 ಲಕ್ಷದವರೆಗೆ ಸಂಬಳ

ನಿಮ್ಹಾನ್ಸ್​ನಲ್ಲಿ MD ಆದವರಿಗೆ ಬಂಪರ್ ಉದ್ಯೋಗ-1 ಲಕ್ಷದವರೆಗೆ ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಕ್ಲಿನಿಕಲ್ ಪೋಸ್ಟ್ ಡಾಕ್ಟರಲ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.

  • News18 Kannada
  • Last Updated :
  • Bangalore [Bangalore], India
  • Share this:

    NIMHANS Recruitment 2023: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಕ್ಲಿನಿಕಲ್ ಪೋಸ್ಟ್ ಡಾಕ್ಟರಲ್ ಫೆಲೋ(Clinical Post Doctoral Fellow)​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 2, 2023 ರೊಳಗೆ ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ ಇ-ಮೇಲ್ ಮಾಡಿ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆನಿಮ್ಹಾನ್ಸ್​
    ಹುದ್ದೆನಿಕಲ್ ಪೋಸ್ಟ್ ಡಾಕ್ಟರಲ್ ಫೆಲೋ
    ಒಟ್ಟು ಹುದ್ದೆ2
    ವೇತನಮಾಸಿಕ ₹ 96,892
    ಉದ್ಯೋಗದ ಸ್ಥಳಬೆಂಗಳೂರು

    ವಿದ್ಯಾರ್ಹತೆ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಕ್ಲಿನಿಕಲ್ ಪೋಸ್ಟ್ ಡಾಕ್ಟರಲ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೈಕಿಯಾಟ್ರಿಯಲ್ಲಿ ಎಂಡಿ ಪೂರ್ಣಗೊಳಿಸಿರಬೇಕು.


    ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.


    ವಯೋಮಿತಿ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಕ್ಲಿನಿಕಲ್ ಪೋಸ್ಟ್ ಡಾಕ್ಟರಲ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.


    ಇದನ್ನೂ ಓದಿ: NMPT Recruitment 2022: ಮಂಗಳೂರು ಪೋರ್ಟ್​ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ- ಸಂಬಳ 70,000


    ವೇತನ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಕ್ಲಿನಿಕಲ್ ಪೋಸ್ಟ್ ಡಾಕ್ಟರಲ್ ಫೆಲೋ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 96,892 ವೇತನ ನೀಡಲಾಗುತ್ತದೆ.


    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು, ರೆಸ್ಯೂಮ್​ ಹಾಗೂ ಇತರೆ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ adbs.project@gmail.com ಗೆ ಕಳುಹಿಸಬೇಕು.


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 12/12/2022
    ಇ-ಮೇಲ್ ಕಳುಹಿಸಲು ಕೊನೆ ದಿನ: 02/01/2023

    Published by:Latha CG
    First published: