• Home
  • »
  • News
  • »
  • jobs
  • »
  • ನಿಮ್ಹಾನ್ಸ್​ನಲ್ಲಿ ಕೆಲಸ ಖಾಲಿ ಇದೆ, ಮಾಸಿಕ ವೇತನ 35,000- ಆಸಕ್ತರು ಈಗಲೇ ಅರ್ಜಿ ಹಾಕಿ

ನಿಮ್ಹಾನ್ಸ್​ನಲ್ಲಿ ಕೆಲಸ ಖಾಲಿ ಇದೆ, ಮಾಸಿಕ ವೇತನ 35,000- ಆಸಕ್ತರು ಈಗಲೇ ಅರ್ಜಿ ಹಾಕಿ

ನಿಮ್ಹಾನ್ಸ್​

ನಿಮ್ಹಾನ್ಸ್​

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ virologyvacancies@gmail.com ಗೆ ಜನವರಿ 25ಕ್ಕೆ ಮುನ್ನ ಕಳುಹಿಸಬೇಕು.

  • Share this:

NIMHANS Recruitment 2022: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-II​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 25, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನಿಮ್ಹಾನ್ಸ್​
ಹುದ್ದೆಪ್ರಾಜೆಕ್ಟ್​ ಅಸೋಸಿಯೇಟ್-II
ಒಟ್ಟು ಹುದ್ದೆ2
ವೇತನಮಾಸಿಕ ₹ 28,000-35,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆ ದಿನಜನವರಿ 25, 2023

ವಿದ್ಯಾರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್​ ಅಸೋಸಿಯೇಟ್-II​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್/ತಂತ್ರಜ್ಞಾನ/ವೈದ್ಯಶಾಸ್ತ್ರದಲ್ಲಿ ಪದವಿ, ನೈಸರ್ಗಿಕ/ಕೃಷಿ ವಿಜ್ಞಾನ/ಪಶುವೈದ್ಯಕೀಯ ವಿಜ್ಞಾನಗಳಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: ITI, ಡಿಪ್ಲೊಮಾ ಪಾಸಾದವರಿಗೆ ಇಲ್ಲಿದೆ ಬಂಪರ್ ಉದ್ಯೋಗ-ತಿಂಗಳಿಗೆ 30,000 ಸಂಬಳ


ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್​ ಅಸೋಸಿಯೇಟ್-II​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಮಾಸಿಕ ₹ 28,000-35,000


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ virologyvacancies@gmail.com ಗೆ ಜನವರಿ 25ಕ್ಕೆ ಮುನ್ನ ಕಳುಹಿಸಬೇಕು.




ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/01/202
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 25, 2023

Published by:Latha CG
First published: