NIT Karnataka Recruitment 2023: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ(National Institute of Technology -Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸ್ಟೂಡೆಂಟ್ ಇಂಟರ್ನ್ಶಿಪ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 15, 2023 ಅಂದರೆ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ಸುರತ್ಕಲ್ನಲ್ಲಿ ಉದ್ಯೋಗ (Job) ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಅಭ್ಯರ್ಥಿಗಳು ಈಗಲೇ ಅಪ್ಲೈ ಮಾಡಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ |
ಹುದ್ದೆ | ಸ್ಟೂಡೆಂಟ್ ಇಂಟರ್ನ್ಶಿಪ್ |
ಒಟ್ಟು ಹುದ್ದೆ | 2 |
ವಿದ್ಯಾರ್ಹತೆ | ಬಿಇ/ಬಿ.ಟೆಕ್ |
ವೇತನ | ಮಾಸಿಕ 5000 ರೂ. |
ಉದ್ಯೋಗದ ಸ್ಥಳ | ಸುರತ್ಕಲ್ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 15, 2023 |
ವೇತನ: ಮಾಸಿಕ ₹ 5000
ವಯೋಮಿತಿ: ಅಧಿಸೂಚನೆ ಪರಿಶೀಲಿಸಿ. ಮೀಸಲಾತಿ ಅನುಸಾರ ಅಭ್ಯರ್ಥಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: Union Bank Recruitment 2023: ಹತ್ತನೇ ಕ್ಲಾಸ್ ಪಾಸಾದವ್ರಿಗೆ ಬ್ಯಾಂಕ್ ಉದ್ಯೋಗ- ಅರ್ಜಿ ಹಾಕಲು ಇವತ್ತೇ ಕೊನೆ ದಿನ
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಉದ್ಯೋಗದ ಸ್ಥಳ: ಸುರತ್ಕಲ್
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 15, 2023 (ಇಂದು)
ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ದಿನಾಂಕ: ಏಪ್ರಿಲ್ 25, 2023
ಆಯ್ಕೆಯಾದ ವಿದ್ಯಾರ್ಥಿಗಳಿಂದ ಸ್ವೀಕೃತಿ ದಿನಾಂಕ: ಏಪ್ರಿಲ್ 28, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ