PGCIL Recruitment 2022: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (Power Grid Corporation of India Limited -PGCIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 23 ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 14, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ |
ಹುದ್ದೆ | ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ |
ಒಟ್ಟು ಹುದ್ದೆ | 23 |
ವೇತನ | ಮಾಸಿಕ 60,000-2,00,000 |
ಉದ್ಯೋಗದ ಸ್ಥಳ | ಭಾರತ |
ವಿದ್ಯಾರ್ಹತೆ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಬಿಎಸ್ಸಿ, ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: RRB: ರೈಲ್ವೆ ನೇಮಕಾತಿ ಮಂಡಳಿ: ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ, ಇಲ್ಲಿದೆ ಮಹತ್ವದ ಅಪ್ಡೇಟ್
ವಯೋಮಿತಿ:
ಡೆಪ್ಯುಟಿ ಮ್ಯಾನೇಜರ್- 36 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್-33 ವರ್ಷ
ವಯೋಮಿತಿ ಸಡಿಲಿಕೆ:
ಒಬಿಸಿ(NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ವೇತನ:
ಡೆಪ್ಯುಟಿ ಮ್ಯಾನೇಜರ್- ಮಾಸಿಕ ₹70,000- 2,00,000
ಅಸಿಸ್ಟೆಂಟ್ ಮ್ಯಾನೇಜರ್-ಮಾಸಿಕ ₹60,000-1,80,000
ಇದನ್ನೂ ಓದಿ: Government Job: ಬಿ.ಎಡ್ ಅಭ್ಯರ್ಥಿಗಳಿಗೆ ಸರ್ಕಾರಿ ನೌಕರಿ- 50 ವರ್ಷದವರೂ ಅಪ್ಲೈ ಮಾಡಬಹುದು
ಅರ್ಜಿ ಶುಲ್ಕ:
SC/ST/PWD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಉಳಿದ ಅಭ್ಯರ್ಥಿಗಳಿಗೆ- 500 ರೂ.
ಪಾವತಿಸುವ ಬಗೆ- ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಸ್ಕ್ರೀನಿಂಗ್ ಟೆಸ್ಟ್
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 14/01/2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ