PGCIL Recruitment 2023: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (Power Grid Corporation of India Limited -PGCIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 35 ಅಸಿಸ್ಟೆಂಟ್ ಆಫೀಸರ್ ಟ್ರೈನಿ, ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್ 5, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 11 ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ |
ಹುದ್ದೆ | ಅಸಿಸ್ಟೆಂಟ್ ಆಫೀಸರ್ ಟ್ರೈನಿ, ಮ್ಯಾನೇಜ್ಮೆಂಟ್ ಟ್ರೈನಿ |
ಒಟ್ಟು ಹುದ್ದೆ | 35 |
ವೇತನ | ಮಾಸಿಕ 56,100-1,77,500 ರೂ. |
ಉದ್ಯೋಗದ ಸ್ಥಳ | ಭಾರತ |
ಅಸಿಸ್ಟೆಂಟ್ ಆಫೀಸರ್ ಟ್ರೈನಿ (ಪವರ್ಗ್ರಿಡ್)- 27
ಅಸಿಸ್ಟೆಂಟ್ ಆಫೀಸರ್ ಟ್ರೈನಿ (CTUIL)-3
ಮ್ಯಾನೇಜ್ಮೆಂಟ್ ಟ್ರೈನಿ (DVC)- 5
ಇದನ್ನೂ ಓದಿ: ಕರ್ನಾಟಕದಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕ- ಆಸಕ್ತರು ಈಗಲೇ ಅಪ್ಲೈ ಮಾಡಿ
ವಿದ್ಯಾರ್ಹತೆ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, HR/ಪರ್ಸನಲ್ ಮ್ಯಾನೇಜ್ಮೆಂಟ್ ಮತ್ತು ಕೈಗಾರಿಕಾ ಸಂಬಂಧಗಳು/ಸೋಷಿಯಲ್ ವರ್ಕ್ನಲ್ಲಿ MBA ಪೂರ್ಣಗೊಳಿಸಿರಬೇಕು.
ವಯೋಮಿತಿ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 31, 2022ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ(NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
ವೇತನ:
ಮಾಸಿಕ 56,100-1,77,500 ರೂ.
ಅರ್ಜಿ ಶುಲ್ಕ:
SC/ST/PWD/ ಮಾಜಿ ಸೈನಿಕ/ ಡಿಪಾರ್ಟ್ಮೆಂಟ್ ಅಭ್ಯರ್ಥಿಗಳಿಗೆ- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ- 500 ರೂ.
ಪಾವತಿಸುವ ಬಗೆ- ಆನ್ಲೈನ್
ಇದನ್ನೂ ಓದಿ: ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದಲ್ಲಿ ಉದ್ಯೋಗಾವಕಾಶ- ಡಿಗ್ರಿ ಆದವರು ಅರ್ಜಿ ಹಾಕಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಗುಂಪು ಚರ್ಚೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/02/2023
ಅರ್ಜಿ ಸಲ್ಲಿಸಲು ಕೊನೆ ದಿನ: ಮಾರ್ಚ್ 5, 2023
UGC-NET ಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ (2022): ಡಿಸೆಂಬರ್ 29, 2022
UGC-NET ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (2022): ಜನವರಿ 17, 2023
UGC-NET ಪರೀಕ್ಷೆಯ ದಿನಾಂಕ: ಫೆಬ್ರವರಿ 21 ರಿಂದ ಮಾರ್ಚ್ 10, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ