• ಹೋಂ
  • »
  • ನ್ಯೂಸ್
  • »
  • Jobs
  • »
  • Post Office Jobs: ಭಾರತೀಯ ಅಂಚೆ ಇಲಾಖೆ ನೇಮಕಾತಿ- ನಾಳೆ ಲಾಸ್ಟ್ ಡೇಟ್, ಈಗಲೇ ಅರ್ಜಿ ಹಾಕಿ

Post Office Jobs: ಭಾರತೀಯ ಅಂಚೆ ಇಲಾಖೆ ನೇಮಕಾತಿ- ನಾಳೆ ಲಾಸ್ಟ್ ಡೇಟ್, ಈಗಲೇ ಅರ್ಜಿ ಹಾಕಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಮೇ 10, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ.

  • News18 Kannada
  • 5-MIN READ
  • Last Updated :
  • New Delhi, India
  • Share this:

 India Post Recruitment 2023: ಪೋಸ್ಟ್ ಆಫೀಸ್ ಕೆಲಸ (Post Office Job) ಹುಡುಕುತ್ತಿರುವವರಿಗೆ ಇಲ್ಲೊಂದು ಬಂಪರ್ ಗುಡ್ ನ್ಯೂಸ್ (Good News) ಇದೆ. ಭಾರತೀಯ ಅಂಚೆ ಇಲಾಖೆಯು(India Postal Department) ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತಿದೆ. ಒಟ್ಟು 2 ಸ್ಟಾಫ್ ಕಾರ್ ಡ್ರೈವರ್ (Staff Car Driver) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಮೇ 10, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.



ಸಂಸ್ಥೆಭಾರತೀಯ ಅಂಚೆ ಇಲಾಖೆ
ಹುದ್ದೆಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆ2
ವಿದ್ಯಾರ್ಹತೆ10ನೇ ತರಗತಿ
ವೇತನಮಾಸಿಕ ₹ 19,900- 63,200
ಉದ್ಯೋಗದ ಸ್ಥಳಹರಿಯಾಣ
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 10, 2023 (ನಾಳೆ)

ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ?
ರೋಹ್ಟಕ್- 1
ಹಿಸಾರ್- 1




ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.


ಇದನ್ನೂ ಓದಿ: Banking Jobs: ಯೆಸ್ ಬ್ಯಾಂಕ್​​ನಲ್ಲಿ ಭರ್ಜರಿ ಉದ್ಯೋಗಾವಕಾಶ- ಇವತ್ತೇ ಅಪ್ಲೈ ಮಾಡಿ


ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 19,900- 63,200 ವೇತನ ಕೊಡಲಾಗುತ್ತದೆ.


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಮೇ 10, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸ್ಕಿಲ್ ಟೆಸ್ಟ್, ಡ್ರೈವಿಂಗ್ ಟೆಸ್ಟ್​ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಇದನ್ನೂ ಓದಿ: JOBS: ಕಾಫಿ ಬೋರ್ಡ್​ ಚಿಕ್ಕಮಗಳೂರಿನಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ 35 ಸಾವಿರ ಸಂಬಳ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಸಹಾಯಕ ನಿರ್ದೇಶಕ ಅಂಚೆ ಸೇವೆಗಳು-I
O/o ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್
ಹರಿಯಾಣ ಸರ್ಕಲ್
ದಿ ಮಾಲ್
ಅಂಬಾಲಾ ಕಂಟೋನ್ಮೆಂಟ್ - 133001

top videos


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/04/2023
    ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 10, 2023

    First published: