• Home
  • »
  • News
  • »
  • jobs
  • »
  • RRI Recruitment 2023: ರಾಮನ್​ ಸಂಶೋಧನಾ ಸಂಸ್ಥೆಯಲ್ಲಿ ಈ ಹುದ್ದೆಗೆ ಅಪ್ಲೈ ಮಾಡಿ- 54 ಸಾವಿರ ಸಂಬಳ

RRI Recruitment 2023: ರಾಮನ್​ ಸಂಶೋಧನಾ ಸಂಸ್ಥೆಯಲ್ಲಿ ಈ ಹುದ್ದೆಗೆ ಅಪ್ಲೈ ಮಾಡಿ- 54 ಸಾವಿರ ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಈ ಕೂಡಲೇ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

  • Share this:

    RRI Recruitment 2023: ರಾಮನ್​ ಸಂಶೋಧನಾ ಸಂಸ್ಥೆ(Raman Research Institute)- ಬೆಂಗಳೂರಿನಲ್ಲಿ (Bengaluru) ವಿವಿಧ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪೋಸ್ಟ್​ ಡಾಕ್ಟರಲ್ ರಿಸರ್ಚ್​ ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಈ ಕೂಡಲೇ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆರಾಮನ್​ ಸಂಶೋಧನಾ ಸಂಸ್ಥೆ
    ಹುದ್ದೆಪೋಸ್ಟ್​ ಡಾಕ್ಟರಲ್ ರಿಸರ್ಚ್​ ಅಸೋಸಿಯೇಟ್
    ಒಟ್ಟು ಹುದ್ದೆ2
    ವೇತನಮಾಸಿಕ ₹ 47,000-54,000
    ಉದ್ಯೋಗದ ಸ್ಥಳಬೆಂಗಳೂರು


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 15/12/2022
    ಇ-ಮೇಲ್ ಕಳುಹಿಸಲು ಕೊನೆಯ ದಿನ: 15/01/2023


    ವಿದ್ಯಾರ್ಹತೆ:
    ರಾಮನ್​ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಫಿಜಿಕಲ್ ಸೈನ್ಸಸ್​, ಆಪ್ಟಿಕಲ್ ಎಂಜಿನಿಯರಿಂಗ್​ನಲ್ಲಿ ಡಾಕ್ಟರಲ್ ಡಿಗ್ರಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: CIIL Recruitment 2023: ಮೈಸೂರಿನಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ- ಅರ್ಜಿ ಹಾಕಲು ನಾಳೆಯೇ ಕೊನೆ ದಿನ


    ವಯೋಮಿತಿ:
    ರಾಮನ್​ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 15, 2023ಕ್ಕೆ ಗರಿಷ್ಠ 36 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ವೇತನ:
    ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 47,000-54,000 ಸಂಬಳ ಕೊಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್​ನೊಂದಿಗೆ ಇ-ಮೇಲ್ ಐಡಿ quic-job@rri.res.in ಗೆ ಜನವರಿ 15, 2023ರೊಳಗೆ ಕಳುಹಿಸಬೇಕು.


    ಇದನ್ನೂ ಓದಿ: NCERT Recruitment 2023: ಪ್ರಿನ್ಸಿಪಾಲ್ ಹುದ್ದೆಗಳು ಖಾಲಿ ಇವೆ- ತಿಂಗಳಿಗೆ 67,000 ಸಂಬಳ


    ಉದ್ಯೋಗದ ಸ್ಥಳ:
    ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

    Published by:Latha CG
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು