SAMEER Recruitment 2023: ಸೊಸೈಟಿ ಫಾರ್ ಅಪ್ಲೈಡ್ ಮೈಕ್ರೋವೇವ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ & ರಿಸರ್ಚ್(Society for Applied Microwave Electronics Engineering & Research-SAMEER) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 21 ಸೈಂಟಿಸ್ಟ್-ಬಿ, ಸೈಂಟಿಸ್ಟ್- ಸಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 8, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಸೊಸೈಟಿ ಫಾರ್ ಅಪ್ಲೈಡ್ ಮೈಕ್ರೋವೇವ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ & ರಿಸರ್ಚ್ |
ಹುದ್ದೆ | ಸೈಂಟಿಸ್ಟ್-ಬಿ, ಸೈಂಟಿಸ್ಟ್- ಸಿ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಬಿಇ/ಬಿ.ಟೆಕ್, ಎಂಇ, ಎಂ.ಟೆಕ್, ಎಂಎಸ್ |
ವೇತನ | ಮಾಸಿಕ ₹ 67,700-2,08,700 |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 8, 2023 |
ವಯೋಮಿತಿ:
ಸೈಂಟಿಸ್ಟ್-ಬಿ: 30 ವರ್ಷ
ಸೈಂಟಿಸ್ಟ್-ಸಿ: 35 ವರ್ಷ
ಇದನ್ನೂ ಓದಿ: Job Alert: ಬಳ್ಳಾರಿ & ತುಮಕೂರಿನಲ್ಲಿ ರಾಜ್ಯ ಸರ್ಕಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ- ಆಸಕ್ತರು ಅಪ್ಲೈ ಮಾಡಿ
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು- 800 ರೂ.
SC/ST/PWD/ ಮಹಿಳಾ ಅಭ್ಯರ್ಥಿಗಳು- 400 ರೂ.
ಪಾವತಿಸುವ ಬಗೆ- ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಕಂಪ್ಯೂಟರ್ ಆಧಾರಿತ ಪರೀಕ್ಷೆ
ಸಂದರ್ಶನ
ವೇತನ:
ಸೈಂಟಿಸ್ಟ್-ಬಿ: ಮಾಸಿಕ ₹ 56,100-1,77,500
ಸೈಂಟಿಸ್ಟ್-ಸಿ: ಮಾಸಿಕ ₹ 67,700-2,08,700
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 8, 2023
ಗಮನಿಸಿ: ಅರ್ಜಿ ನಮೂನೆಯ ಆನ್‌ಲೈನ್ ಸಲ್ಲಿಕೆ/ಅಡ್ಮಿಟ್ ಕಾರ್ಡ್ ಡೌನ್‌ಲೋಡ್‌ಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗಾಗಿ, ದಯವಿಟ್ಟು
recruit@nielit.gov.in ಗೆ ಇ-ಮೇಲ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ