Spices Board Recruitment 2023: ಭಾರತೀಯ ಮಸಾಲೆ ಮಂಡಳಿ(Spices Board of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಕನ್ಸಲ್ಟೆಂಟ್(Consultant) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಕೊಚ್ಚಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ಮಸಾಲೆ ಮಂಡಳಿ |
ಹುದ್ದೆ | ಕನ್ಸಲ್ಟೆಂಟ್ |
ಒಟ್ಟು ಹುದ್ದೆ | 7 |
ವಿದ್ಯಾರ್ಹತೆ | ಪದವಿ |
ವೇತನ | ಮಾಸಿಕ ₹ 40,000-60,000 |
ಉದ್ಯೋಗದ ಸ್ಥಳ | ಮುಂಬೈ, ಬರಾಬಂಕಿ, ಬೆಂಗಳೂರು, ಕೊಚ್ಚಿ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 17, 2023 |
ವಯೋಮಿತಿ:
ಭಾರತೀಯ ಮಸಾಲೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 17, 2023ಕ್ಕೆ ಗರಿಷ್ಠ 63 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: RITES Recruitment 2023: ರೈಲ್ವೆ ಇಲಾಖೆಯಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ ₹ 2.80 ಲಕ್ಷ ಸಂಬಳ
ವೇತನ:
ಭಾರತೀಯ ಮಸಾಲೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 40,000-60,000 ವೇತನ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತೀಯ ಮಸಾಲೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮುಂಬೈ, ಬರಾಬಂಕಿ, ಬೆಂಗಳೂರು, ಕೊಚ್ಚಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಪ್ರೆಸೆಂಟೇಶನ್
ಸಂದರ್ಶನ
ಇದನ್ನೂ ಓದಿ: NHM Dharwad Recruitment 2023: ಮೆಡಿಕಲ್ ಆಫೀಸರ್, ನರ್ಸ್ ಹುದ್ದೆಗಳಿಗೆ ನಾಳೆಯೇ ಸಂದರ್ಶನ- ಆಸಕ್ತರು ಪಾಲ್ಗೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಕಾರ್ಯದರ್ಶಿ
ಮಸಾಲೆ ಮಂಡಳಿ
ಸುಗಂಧ ಭವನ
N.H. ಬೈ ಪಾಸ್
ಪಲರಿವಟ್ಟಂ. P.O.
ಕೊಚ್ಚಿ - 682025
ಅರ್ಜಿ ಇಲ್ಲಿದೆ:
ಅರ್ಜಿ & ನೋಟಿಫಿಕೇಶನ್ಅರ್ಜಿ & ನೋಟಿಫಿಕೇಶನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 17, 2023
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 0484-2333610 to 616 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ