Survey of India Recruitment 2023: ಸರ್ವೇ ಆಫ್ ಇಂಡಿಯಾ (Survey of India ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 21 ಮೋಟಾರ್ ಡ್ರೈವರ್ & ಮೆಕ್ಯಾನಿಕ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸುವಂತೆ ನೋಟಿಫಿಕೇಶನ್ನಲ್ಲಿ (Notification) ತಿಳಿಸಲಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿದ್ಯಾರ್ಹತೆ:
ಸರ್ವೇ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು, ಜೊತೆಗೆ ಅಧಿಕೃತ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
ಇದನ್ನೂ ಓದಿ: SBI Recruitment 2023: ಲಕ್ಷಗಟ್ಟಲೇ ಸಂಬಳದ ಉದ್ಯೋಗ ಬೇಕಾ? ಇಲ್ಲಿ ಅಪ್ಲೈ ಮಾಡಿ, ಯಾವುದೇ ಎಕ್ಸಾಂ ಇಲ್ಲ
ವಯೋಮಿತಿ:
ಸರ್ವೇ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 31, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು- 5 ವರ್ಷ
ಒಬಿಸಿ ಅಭ್ಯರ್ಥಿಗಳು- 3 ವರ್ಷ
ಆಯ್ಕೆ ಪ್ರಕ್ರಿಯೆ:
ಪ್ರಾಕ್ಟಿಕಲ್ ಟೆಸ್ಟ್
ಸ್ಕಿಲ್ ಟೆಸ್ಟ್
ಡ್ರೈವಿಂಗ್ ಟೆಸ್ಟ್
ಸಂದರ್ಶನ
ವೇತನ:
ಮಾಸಿಕ ₹ 19,900-63,200
ಇದನ್ನೂ ಓದಿ:UPSC Recruitment 2023: ಡಿಪ್ಲೊಮಾ, ಎಂಜಿನಿಯರಿಂಗ್ ಆದವರಿಗೆ UPSC ಉದ್ಯೋಗ- ಈಗಲೇ ಅಪ್ಲೈ ಮಾಡಿ
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ನಿರ್ದೇಶಕರು
ಕರ್ನಾಟಕ ಜಿಯೋ-ಸ್ಪೇಷಿಯಲ್ ಡೇಟಾ ಸೆಂಟರ್
ಸರ್ವೆ ಆಫ್ ಇಂಡಿಯಾ
ಅಂಚೆ ಪೆಟ್ಟಿಗೆ ಸಂಖ್ಯೆ-3403
ಸರ್ಜಾಪುರ ರಸ್ತೆ
ಕೋರಮಂಗಲ-II ಬ್ಲಾಕ್
ಬೆಂಗಳೂರು-560034
ಸಂಸ್ಥೆ | ಸರ್ವೇ ಆಫ್ ಇಂಡಿಯಾ |
ಹುದ್ದೆ | ಮೋಟಾರ್ ಡ್ರೈವರ್ & ಮೆಕ್ಯಾನಿಕ್ |
ಒಟ್ಟು ಹುದ್ದೆ | 21 |
ವಿದ್ಯಾರ್ಹತೆ | 10ನೇ ತರಗತಿ |
ವೇತನ | ಮಾಸಿಕ ₹ 19,900-63,200 |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 31, 2023 |
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ