TRIFED Recruitment 2023: ಟ್ರೈಬಲ್ ಕೋಆಪರೇಟಿವ್ ಮಾರ್ಕೆಟಿಂಗ್ ಡೆವಲಪ್‌ಮೆಂಟ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (Tribal Cooperative Marketing Development Federation of India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಡೆಪ್ಯುಟಿ ಜನರಲ್ ಮ್ಯಾನೇಜರ್ (Deputy General Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 22, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಟ್ರೈಬಲ್ ಕೋಆಪರೇಟಿವ್ ಮಾರ್ಕೆಟಿಂಗ್ ಡೆವಲಪ್‌ಮೆಂಟ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ |
ಹುದ್ದೆ | ಡೆಪ್ಯುಟಿ ಜನರಲ್ ಮ್ಯಾನೇಜರ್ |
ಒಟ್ಟು ಹುದ್ದೆ | 7 |
ವೇತನ | ಮಾಸಿಕ ₹ 1,23,100- 2,15,900 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 22, 2023 |
ವೇತನ:
ಮಾಸಿಕ ₹ 1,23,100- 2,15,900
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್ (ಸಿಬ್ಬಂದಿ),
TRIFED
NSIC ಬಿಸಿನೆಸ್ ಪಾರ್ಕ್
ಓಖ್ಲಾ ಹಂತ III
ನವದೆಹಲಿ-110020
ಇದನ್ನೂ ಓದಿ: Karnataka Jobs: ತೋಟಗಾರಿಕಾ ಇಲಾಖೆ ನೇಮಕಾತಿ- ಬರೋಬ್ಬರಿ 5465 ಹುದ್ದೆಗಳ ಭರ್ತಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 22, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ