TRIFED Recruitment 2023: ಟ್ರೈಬಲ್ ಕೋಆಪರೇಟಿವ್ ಮಾರ್ಕೆಟಿಂಗ್ ಡೆವಲಪ್‌ಮೆಂಟ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (Tribal Cooperative Marketing Development Federation of India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಡೆಪ್ಯುಟಿ ಜನರಲ್ ಮ್ಯಾನೇಜರ್ (Deputy General Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಟ್ರೈಬಲ್ ಕೋಆಪರೇಟಿವ್ ಮಾರ್ಕೆಟಿಂಗ್ ಡೆವಲಪ್‌ಮೆಂಟ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ |
ಹುದ್ದೆ | ಡೆಪ್ಯುಟಿ ಜನರಲ್ ಮ್ಯಾನೇಜರ್ |
ಒಟ್ಟು ಹುದ್ದೆ | 7 |
ವೇತನ | ಮಾಸಿಕ ₹ 1,23,100- 2,15,900 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 22, 2023 |
ಇದನ್ನೂ ಓದಿ: KMF TUMUL Recruitment 2023: ಕೆಎಂಎಫ್ ತುಮಕೂರಿನಲ್ಲಿ 219 ಹುದ್ದೆಗಳ ನೇಮಕ- ಅರ್ಜಿ ಹಾಕಲು ನಾಳೆಯೇ ಲಾಸ್ಟ್ ಡೇಟ್
ವೇತನ:
ಮಾಸಿಕ ₹ 1,23,100- 2,15,900
ಅಭ್ಯರ್ಥಿಗಳ ವಿದ್ಯಾರ್ಹತೆ ಏನಿರಬೇಕು? ವಯೋಮಿತಿ ಎಷ್ಟಿರಬೇಕು? ಎಂಬೆಲ್ಲಾ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ನೋಟಿಫಿಕೇಶನ್ ಪರಿಶೀಲಿಸಿ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್ (ಸಿಬ್ಬಂದಿ),
TRIFED
NSIC ಬಿಸಿನೆಸ್ ಪಾರ್ಕ್
ಓಖ್ಲಾ ಹಂತ III
ನವದೆಹಲಿ-110020
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 22, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ