UIDAI Recruitment 2023: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು(Unique Identification Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಸೆಕ್ಷನ್ ಆಫೀಸರ್, ಪ್ರೈವೇಟ್ ಸೆಕ್ರೆಟರಿ, ಅಕೌಂಟೆಂಟ್, ಸೀನಿಯರ್ ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಡಿಸೆಂಬರ್ 29, 2022ರಿಂದಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಫೆಬ್ರವರಿ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ |
ಹುದ್ದೆ | ಸೆಕ್ಷನ್ ಆಫೀಸರ್, ಪ್ರೈವೇಟ್ ಸೆಕ್ರೆಟರಿ, ಅಕೌಂಟೆಂಟ್, ಸೀನಿಯರ್ ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್ |
ಒಟ್ಟು ಹುದ್ದೆ | 9 |
ವೇತನ | ನಿಯಮಾನುಸಾರ |
ವಿದ್ಯಾರ್ಹತೆ | ಸಿಎ, ಎಂಬಿಎ |
ಉದ್ಯೋಗದ ಸ್ಥಳ | ನವದೆಹಲಿ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 13, 2023 |
ವಿದ್ಯಾರ್ಹತೆ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ, ಎಂಬಿಎ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: JOBS: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗಡಿ ರಸ್ತೆಗಳ ಸಂಸ್ಥೆ- ಜ. 31ರೊಳಗೆ ಅಪ್ಲೈ ಮಾಡಿ
ಸೀನಿಯರ್ ಅಕೌಂಟ್ಸ್ ಆಫೀಸರ್- ಸಿಎ/ ಕಾಸ್ಟ್ ಅಕೌಂಟೆಂಟ್, ಎಂಬಿಎ
ಪ್ರೈವೇಟ್ ಸೆಕ್ರೆಟರಿ-ಸಿಎ/ ಕಾಸ್ಟ್ ಅಕೌಂಟೆಂಟ್, ಎಂಬಿಎ
ಸೆಕ್ಷನ್ ಆಫೀಸರ್- ಸಿಎ/ ಕಾಸ್ಟ್ ಅಕೌಂಟೆಂಟ್, ಎಂಬಿಎ
ಅಸಿಸ್ಟೆಂಟ್ ಅಕೌಂಟ್ ಆಫೀಸರ್-ಸಿಎ/ ಕಾಸ್ಟ್ ಅಕೌಂಟೆಂಟ್, ಎಂಬಿಎ
ಅಕೌಂಟೆಂಟ್- ಕಾಮರ್ಸ್ ಪದವಿ
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್- ಸಿಎ/ ಕಾಸ್ಟ್ ಅಕೌಂಟೆಂಟ್, ಎಂಬಿಎ
ಉದ್ಯೋಗದ ಸ್ಥಳ:
ನವದೆಹಲಿ
ವಯೋಮಿತಿ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು.
ವೇತನ:
ನಿಗದಿಪಡಿಸಿಲ್ಲ.
ಇದನ್ನೂ ಓದಿ: UPSC Recruitment: 111 ಹುದ್ದೆಗಳ ಭರ್ತಿಗೆ ಅಧಿಸೂಚನೆ- ಆಸಕ್ತರು ಅಪ್ಲೈ ಮಾಡಿ
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ನಿರ್ದೇಶಕ (HR) ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
ಪ್ರಾದೇಶಿಕ ಕಚೇರಿ
ದೆಹಲಿ
ಸುಪ್ರೀಂ ಕೋರ್ಟ್ ಮೆಟ್ರೋ ನಿಲ್ದಾಣದ ಕೆಳಗೆ
ಪ್ರಗತಿ ಮೈದಾನ
ನವದೆಹಲಿ - 110001
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 13/02/2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ