UIDAI Recruitment 2023: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(Unique Identification Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ (Assistant Director General) ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಮೇ 15, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಆಸಕ್ತರು ಆಫ್ಲೈನ್(Offline) ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ |
ಹುದ್ದೆ | ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ |
ವಿದ್ಯಾರ್ಹತೆ | ಬಿಇ/ಬಿ.ಟೆಕ್, ಸ್ನಾತಕೋತ್ತರ ಪದವಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 15, 2023 |
ವೇತನ:
ನಿಗದಿಪಡಿಸಿಲ್ಲ.
ಇದನ್ನೂ ಓದಿ: High Court Jobs: 10ನೇ ತರಗತಿ ಪಾಸಾಗಿದ್ರೆ ಹೈ ಕೋರ್ಟ್ ಹುದ್ದೆಗಳಿಗೆ ಅರ್ಜಿ ಹಾಕಿ
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 15, 2023
ಇದನ್ನೂ ಓದಿ: Post Office Jobs: ಪೋಸ್ಟ್ ಆಫೀಸ್ ಹುದ್ದೆಗಳಿಗೆ ಇವತ್ತೇ ಅರ್ಜಿ ಹಾಕಿ- ನಾಳೆಯೇ ಲಾಸ್ಟ್ ಡೇಟ್
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ನಿರ್ದೇಶಕರು (HR)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
ಬಾಂಗ್ಲಾ ಸಾಹಿಬ್ ರಸ್ತೆ
ಕಾಳಿ ಮಂದಿರದ ಹಿಂದೆ
ಗೋಲ್ ಮಾರುಕಟ್ಟೆ
ನವದೆಹಲಿ-110001
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ