UIDAI Recruitment 2023: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (Unique Identification Authority of India) ನೇಮಕಾತಿ ನಡೆಸಲಾಗುತ್ತಿರುವ 10 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಈ ಮೊದಲು ಜನವರಿ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಈಗ ಫೆಬ್ರವರಿ 20, 2023 ರವರೆಗೆ ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು 10 ಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಹಾಕಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ |
ಹುದ್ದೆ | ಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್ |
ಒಟ್ಟು ಹುದ್ದೆ | 10 |
ವಿದ್ಯಾರ್ಹತೆ | ಎಂಜಿನಿಯರಿಂಗ್ |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 20, 2023 |
ಇದನ್ನೂ ಓದಿ: NIT Karnataka ನೇಮಕಾತಿ- JRF ಹುದ್ದೆಗೆ ಈಗಲೇ ಅಪ್ಲೈ ಮಾಡಿ
ವಿದ್ಯಾರ್ಹತೆ ಏನಿರಬೇಕು?
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್/ ಟೆಕ್ನಾಲಜಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ ಎಷ್ಟಿರಬೇಕು?
ಅಭ್ಯರ್ಥಿಗಳ ಗರಿಷ್ಠ ವಯಸ್ಸು ಫೆಬ್ರವರಿ 20, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತೆ?
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: Bengaluru: ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 10th ಪಾಸಾದವರಿಗೆ ಉದ್ಯೋಗ- ಈಗಲೇ ಅಪ್ಲೈ ಮಾಡಿ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳುಹಿಸಬೇಕು.
ನಿರ್ದೇಶಕರು (HR),
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
ಆಧಾರ್ ಕಾಂಪ್ಲೆಕ್ಸ್
NTI ಲೇಔಟ್,
ಟಾಟಾ ನಗರ
ಕೊಡಿಗೇಹಳ್ಳಿ
ಟೆಕ್ನಾಲಜಿ ಸೆಂಟರ್
ಬೆಂಗಳೂರು- 560092
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/11/2022
ಆರ್ಜಿ ಸಲ್ಲಿಸಲು ಕೊನೆ ದಿನ: ಫೆಬ್ರವರಿ 20, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ