UPSC CDS Recruitment 2022-23: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (Union Public Service Commission- UPSC) ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಯಲ್ಲಿ ಖಾಲಿ ಇರುವ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಪೋಸ್ಟ್ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್ಸೈಟ್ upsc.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯು ಇಂದಿನಿಂದ ಅಂದರೆ ಡಿಸೆಂಬರ್ 21 ರಿಂದ ಪ್ರಾರಂಭವಾಗಿದೆ.
ಇದಲ್ಲದೆ, ಅಭ್ಯರ್ಥಿಗಳು ಖಾಲಿ ಇರುವ ಪೋಸ್ಟ್ಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು https://upsc.gov.in/ . ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ ಒಟ್ಟು 341 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಸಂಸ್ಥೆ | ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ |
ಹುದ್ದೆ | ಅಧಿಕಾರಿ |
ಒಟ್ಟು ಹುದ್ದೆ | 341 |
ವಿದ್ಯಾರ್ಹತೆ | ಪದವಿ, ಎಂಜಿನಿಯರಿಂಗ್ |
ಅರ್ಜಿ ಶುಲ್ಕ | 200 ರೂ. |
ಅರ್ಜಿ ಹಾಕಲು ಕೊನೆಯ ದಿನ | 10/01/2023 |
ಒಟ್ಟು ಹುದ್ದೆಗಳ ಸಂಖ್ಯೆ- 341
ಇಂಡಿಯನ್ ಮಿಲಿಟರಿ ಅಕಾಡೆಮಿ(IMA), ಡೆಹ್ರಾಡೂನ್: 100 ಹುದ್ದೆಗಳು
ಇಂಡಿಯನ್ ನೇವಲ್ ಅಕಾಡೆಮಿ, ಎಜಿಮಲ-ಕೋರ್ಸ್: 22 ಹುದ್ದೆಗಳು
ಏರ್ ಫೋರ್ಸ್ ಅಕಾಡೆಮಿ, ಹೈದರಾಬಾದ್: 32 ಹುದ್ದೆಗಳು
ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ, ಚೆನ್ನೈ (ಮದ್ರಾಸ್): 170 ಹುದ್ದೆಗಳು
ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ, ಚೆನ್ನೈ (ಮದ್ರಾಸ್): 17 ಹುದ್ದೆಗಳು
ಇದನ್ನೂ ಓದಿ:Government Job: ಬಿ.ಎಡ್ ಅಭ್ಯರ್ಥಿಗಳಿಗೆ ಸರ್ಕಾರಿ ನೌಕರಿ- 50 ವರ್ಷದವರೂ ಅಪ್ಲೈ ಮಾಡಬಹುದು
UPSC CDS ನೇಮಕಾತಿ 2022-23: ಅರ್ಹತಾ ಮಾನದಂಡಗಳು
IMA ಮತ್ತು ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ, ಚೆನ್ನೈ - ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಅಥವಾ ಅದರ ಸಮಾನ.
ಇಂಡಿಯನ್ ನೇವಲ್ ಅಕಾಡೆಮಿ - ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿ.
ಇಂಡಿಯನ್ ಏರ್ ಫೋರ್ಸ್ ಅಕಾಡೆಮಿ - ಪದವಿ (10+2 ಹಂತದಲ್ಲಿ ಭೌತಶಾಸ್ತ್ರ ಮತ್ತು ಗಣಿತದೊಂದಿಗೆ) ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿ.
ಅರ್ಜಿ ಶುಲ್ಕ
ಅಭ್ಯರ್ಥಿಗಳು ರೂ.200/- ಅನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು.
ಎಸ್ಬಿಐನ ಯಾವುದೇ ಶಾಖೆಯಲ್ಲಿ ಹಣವನ್ನು ಠೇವಣಿ ಮಾಡುವ ಮೂಲಕ ಅಥವಾ ವೀಸಾ / ಮಾಸ್ಟರ್ / ರುಪೇ ಕ್ರೆಡಿಟ್ / ಡೆಬಿಟ್ ಕಾರ್ಡ್ / ಯುಪಿಐ ಪಾವತಿಯನ್ನು ಬಳಸಿಕೊಂಡು ಅಥವಾ ಯಾವುದೇ ಬ್ಯಾಂಕಿನ ಇಂಟರ್ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಬಳಸಿಕೊಂಡು ಅರ್ಜಿ ಶುಲ್ಕವನ್ನು ಪಾವತಿಸಿ.
ಮಹಿಳೆಯರು/SC/ST ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಇದನ್ನೂ ಓದಿ: ESIC Karnataka: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಕೆಲಸ ಖಾಲಿ ಇದೆ- ಮಾಸಿಕ ವೇತನ 67,000
UPSC CDS ನೇಮಕಾತಿ 2022-23: ಪ್ರಮುಖ ದಿನಾಂಕಗಳು
ಆನ್ಲೈನ್ ಅಪ್ಲಿಕೇಶನ್ಗೆ ಪ್ರಾರಂಭ ದಿನಾಂಕ :21/12/ 2022
ಆನ್ಲೈನ್ ಅಪ್ಲಿಕೇಶನ್ಗೆ ಕೊನೆಯ ದಿನಾಂಕ : 10/01/2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ