UPSC Recruitment 2023: ಕೇಂದ್ರ ಲೋಕಸೇವಾ ಆಯೋಗ(Union Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 322 ಅಸಿಸ್ಟೆಂಟ್ ಕಮಾಂಡಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 16, 2023 ಅರ್ಜಿ ಸಲ್ಲಿಸಲು ಕೊನೆಯ ದಿನ(Last Date)ವಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೇಂದ್ರ ಲೋಕಸೇವಾ ಆಯೋಗ |
ಹುದ್ದೆ | ಅಸಿಸ್ಟೆಂಟ್ ಕಮಾಂಡಂಟ್ |
ಒಟ್ಟು ಹುದ್ದೆ | 322 |
ವಿದ್ಯಾರ್ಹತೆ | ಪದವಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 16, 2023 |
ಇದನ್ನೂ ಓದಿ: Banking Jobs: 157 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬ್ಯಾಂಕ್ ಆಫ್ ಬರೋಡಾ- ತಿಂಗಳಿಗೆ 90 ಸಾವಿರ ಸಂಬಳ
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ
ಭಾರತದಲ್ಲಿ ಎಲ್ಲಿ ಬೇಕಾದರೂ
ವಿದ್ಯಾರ್ಹತೆ:
ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: NHM Recruitment 2023: ಬಿ.ಎಸ್ಸಿ ನರ್ಸಿಂಗ್ ಆದವರಿಗೆ ಬಂಪರ್ ಉದ್ಯೋಗ- ಈಗಲೇ ಅಪ್ಲೈ ಮಾಡಿ
ವಯೋಮಿತಿ:
ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು 01/08/2023ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ಅರ್ಜಿ ಶುಲ್ಕ:
SC/ST/ಮಹಿಳಾ ಅಭ್ಯರ್ಥಿಗಳಿಗೆ- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 200 ರೂ.
ಪಾವತಿಸುವ ಬಗೆ- ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಫಿಜಿಕಲ್ ಸ್ಟಾಂಡರ್ಡ್ಸ್/ ಫಿಜಿಕಲ್ ಎಫಿಸಿಯೆನ್ಸಿ ಟೆಸ್ಟ್ & ಮೆಡಿಕಲ್ ಸ್ಟ್ಯಾಂಡರ್ಡ್ಸ್ ಟೆಸ್ಟ್
ಸಂದರ್ಶನ
ಫೈನಲ್ ಸೆಲೆಕ್ಷನ್/ ಮೆರಿಟ್
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 16, 2023 (ನಾಳೆ)
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಮೇ 16, 2023
ಲಿಖಿತ ಪರೀಕ್ಷೆ ನಡೆಯುವ ದಿನ: ಆಗಸ್ಟ್ 6, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ