ಸರ್ಕಾರಿ ಉದ್ಯೋಗಕ್ಕಾಗಿ (Govt Jobs) ಪ್ರಯತ್ನಿಸುತ್ತಿರುವ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸಹಾಯಕ ಕಾರ್ಮಿಕ ಆಯುಕ್ತರು ಸೇರಿದಂತೆ ಹಲವು ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜನವರಿ 12, 2023 ಎಂದು ನಿಗದಿಪಡಿಸಲಾಗಿದೆ.
ಕೆಲಸ | ಕೇಂದ್ರ ಸರ್ಕಾರಿ ಉದ್ಯೋಗ |
ನೇಮಕಾತಿ | ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ |
ಒಟ್ಟು ಹುದ್ದೆಗಳು | 10 |
ಸೈಂಟಿಸ್ಟ್ ಬಿ | 2 ಹುದ್ದೆಗಳು ಖಾಲಿ ಇವೆ |
ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ | 4 ಹುದ್ದೆಗಳು ಖಾಲಿ ಇವೆ |
ಜಂಟಿ ಸಹಾಯಕ ನಿರ್ದೇಶಕರು | 3 ಹುದ್ದೆಗಳು ಖಾಲಿ ಇವೆ |
ಸಹಾಯಕ ಕಾರ್ಮಿಕ ಆಯುಕ್ತರು | 1 ಪೋಸ್ಟ್ ಗೆ ನೇಮಕಾತಿ |
ವೇತನ | ಸರ್ಕಾರಿ ವೇತನ ನಿಯಮಾನುಸಾರ |
ಅರ್ಜಿ ಸಲ್ಲಿಕೆ ಕೊನೆ ದಿನಾಂಕ | 13-01-2023 |
ಅಧಿಕೃತ ವೆಬ್ಸೈನ್ | upsc.gov.in |
ಅರ್ಜಿ ಶುಲ್ಕವನ್ನು ಪಾವತಿಸಲು ಜನವರಿ 13 ಕೊನೆಯ ದಿನವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಕೃತ ಸೈಟ್ upsc.gov.in ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಹತೆ
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ವಿವಿಧ ಅರ್ಹತಾ ಮಾನದಂಡಗಳಿವೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಹತಾ ವಿವರಗಳನ್ನು ತಿಳಿಯಲು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು. ಇದಕ್ಕಾಗಿ ಅಭ್ಯರ್ಥಿಗಳು https://upsc.gov.in/ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಅಧಿಸೂಚನೆ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಶುಲ್ಕ ಪಾವತಿ ಮಾಹಿತಿ
SC/ST/PWBD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಇತರೆ ಅಭ್ಯರ್ಥಿಗಳು ಎಸ್ ಬಿಐನ ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಬಳಸಿಕೊಂಡು ಅಥವಾ ವೀಸಾ/ಮಾಸ್ಟರ್ ಕ್ರೆಡಿಟ್/ಡೆಬಿಟ್ ಕಾರ್ಡ್ಗಳನ್ನು ಬಳಸಿಕೊಂಡು ಅರ್ಜಿ ಶುಲ್ಕವನ್ನು ಪಾವತಿಸಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ