WAPCOS Recruitment 2022: ಜಲ ಮತ್ತು ವಿದ್ಯುತ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್(Water and Power Consultancy Services Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 82 ಫೀಲ್ಡ್ ಎಂಜಿನಿಯರ್(Field Engineer), ಫೀಲ್ಡ್ ಸೂಪರ್ವೈಸರ್(Field Supervisor) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ. ಡಿಸೆಂಬರ್ 16 ಅರ್ಜಿ ಹಾಕಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಜಲ ಮತ್ತು ವಿದ್ಯುತ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ |
ಹುದ್ದೆ | ಫೀಲ್ಡ್ ಎಂಜಿನಿಯರ್, ಫೀಲ್ಡ್ ಸೂಪರ್ವೈಸರ್ |
ಒಟ್ಟು ಹುದ್ದೆ | 82 |
ವೇತನ | ಮಾಸಿಕ 30,000 |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ಇದನ್ನೂ ಓದಿ: ESIC Karnataka Recruitment 2022: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಸೀನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಹತಾ ಮಾನದಂಡಗಳೇನು?
ವಿದ್ಯಾರ್ಹತೆ:
ಫೀಲ್ಡ್ ಎಂಜಿನಿಯರ್- ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ನಲ್ಲಿ ಬಿಇ/ ಬಿ.ಟೆಕ್
ಫೀಲ್ಡ್ ಸೂಪರ್ವೈಸರ್-ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ನಲ್ಲಿ ಡಿಪ್ಲೋಮಾ
ವಯೋಮಿತಿ:
ಜಲ ಮತ್ತು ವಿದ್ಯುತ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು.
ವೇತನ:
ಫೀಲ್ಡ್ ಎಂಜಿನಿಯರ್- ಮಾಸಿಕ ₹ 25,000-30,000
ಫೀಲ್ಡ್ ಸೂಪರ್ವೈಸರ್- ಮಾಸಿಕ ₹ 20,000-25,000
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಡಿಸೆಂಬರ್ 16ರೊಳಗೆ ಪೋಸ್ಟ್ ಮುಖಾಂತರ ಕಳುಹಿಸಬೇಕು.
ಮುಖ್ಯಸ್ಥರು(HR)
WAPCOS ಲಿಮಿಟೆಡ್
ಪ್ಲಾಟ್ ನಂ.76-ಸಿ
ಇನ್ಸ್ಟಿಟ್ಯೂಶನಲ್ ಏರಿಯಾ
ಸೆಕ್ಟರ್- 18
ಗುರುಗ್ರಾಮ
ಹರಿಯಾಣ-122015
ಇದನ್ನೂ ಓದಿ: KIMS Recruitment 2022: ಹುಬ್ಬಳ್ಳಿ ಕಿಮ್ಸ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿಗ್ರಿ ಆಗಿದ್ರೆ Apply ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 16/12/2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ