ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ನಲ್ಲಿ (Centre for Development of Advanced Computing) 650 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರು, ಚೆನ್ನೈ, ಹೈದ್ರಾಬಾದ್, ಕೊಲ್ಕತ್ತಾ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಈ ಉದ್ಯೋಗ ನೇಮಕಾತಿ ನಡೆಯಲಿದೆ. ಪ್ರಾಜೆಕ್ಟ್ ಅಸೋಸಿಯೇಟ್ (Associate), ಪ್ರಾಜೆಕ್ಟ್ ಇಂಜಿನಿಯರ್ (Project Engineer) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಬಿಇ ಪದವಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 20 ಆಗಿದೆ.
ಈ ಸಂಶೋಧನಾ ಹುದ್ದೆಗಳನ್ನು ಮೂರು ವರ್ಷದ ಅವಧಿಗೆ ನೇಮಕ ಮಾಡಲಾಗುತ್ತಿದೆ. ಅಭ್ಯರ್ಥಿಯ ಕಾರ್ಯ ಕ್ಷಮತೆ ಆಧಾರದ ಮೇಲೆ ಹುದ್ದೆಯನ್ನು ಮುಂದುವರೆಸಲಾಗುವುದು. ಈ ಹುದ್ದೆ ನೇಮಕಾತಿ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ವಿವರಗಳು ಈ ಕೆಳಗಿನಂತಿದೆ.
ಸಂಸ್ಥೆಯ ಹೆಸರು: ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (CDAC)
ಹುದ್ದೆಗಳ ಸಂಖ್ಯೆ: 650
ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಇಂಜಿನಿಯರ್
ವೇತನ: ರೂ.360000-2290000 ರೂ ವಾರ್ಷಿಕ ವೇತನ
ಹುದ್ದೆ |
ಹುದ್ದೆ ಸಂಖ್ಯೆ |
ವಯೋಮಿತಿ |
ಪ್ರಾಜೆಕ್ಟ್ ಅಸೋಸಿಯೇಟ್ |
50 |
30 ವರ್ಷ |
ಪ್ರಾಜೆಕ್ಟ್ ಇಂಜಿನಿಯರ್ |
400 |
35 ವರ್ಷ |
ಪ್ರಾಜೆಕ್ಟ್ ಮ್ಯಾನೇಜರ್/ಪ್ರೋಗ್ರಾಂ ಮ್ಯಾನೇಜರ್ |
50 |
56 ವರ್ಷ |
ಹಿರಿಯ ಪ್ರಾಜೆಕ್ಟ್ ಇಂಜಿನಿಯರ್/ಮಾಡ್ಯೂಲ್ ಲೀಡ್/ಪ್ರಾಜೆಕ್ಟ್ ಲೀಡ್ |
150 |
56 ವರ್ಷ |
ವಿದ್ಯಾರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕಂಪ್ಯೂಟರ್ ಅಪ್ಲಿಕೇಶನ್ನಲ್ಲಿ ಬಿಇ, ಬಿಟೆ, ಎಂಇ ಮತ್ತು ಎಂಟೆಕ್ ಪದವಿಯನ್ನು ಪಡೆದಿರಬೇಕು. ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಎಚ್ಡಿ ಪೂರ್ಣಗೊಳಿಸಿರಬೇಕು.
ಇದನ್ನು ಓದಿ: ಲೈಬ್ರರಿ ಸೈನ್ಸ್ ಪದವೀಧರರಿಗೆ ಬಿಇಎಲ್ನಲ್ಲಿದೆ ಉದ್ಯೋಗಾವಕಾಶ
ವಯೋಮಿತಿ ಸಡಿಲಿಕೆ:
ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ನಿಯಮದ ಅನುಸಾರ
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಕೆ
ಆನ್ಲೈನ್ ಮೂಲಕ
ಆಯ್ಕೆ ಪ್ರಕ್ರಿಯೆ:
ಅರ್ಹತೆ, ಅನುಭವ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-07-2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ಜುಲೈ-2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ವೀಕ್ಷಣೆಗೆ :
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
cdac.in
ಇದನ್ನು ಓದಿ: ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ: ಬಿಇ ಆದವರಿಗೆ ಅವಕಾಶ
ಅರ್ಜಿ ಸಲ್ಲಿಕೆ ವಿಧಾನ
ಕಂಪನಿಯ ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸುವ ಬಟನ್ ಕ್ಲಿಕ್ ಮಾಡಬೇಕು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ