CGPSC Recruitment 2021: ತಿಂಗಳಿಗೆ ₹ 2,13,100 ಸಂಬಳ; ಸೀನಿಯರ್ ರೆಸಿಡೆಂಟ್​ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ

ಒಟ್ಟು 386 ಸೀನಿಯರ್ ರೆಸಿಡೆಂಟ್ ಹುದ್ದೆಗಳು ಖಾಲಿ ಇವೆ. ಡಿಸೆಂಬರ್ 16ರಂದು ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಜನವರಿ 14, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಛತ್ತೀಸ್​ಗಢ ನಾಗರಿಕ ಲೋಕಸೇವಾ ಆಯೋಗ

ಛತ್ತೀಸ್​ಗಢ ನಾಗರಿಕ ಲೋಕಸೇವಾ ಆಯೋಗ

  • Share this:
CGPSC Recruitment 2021: ಛತ್ತೀಸ್​ಗಢ ಲೋಕಸೇವಾ ಆಯೋಗ(Chhattisgarh Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸೀನಿಯರ್ ರೆಸಿಡೆಂಟ್(Senior Resident) ಹುದ್ದೆ ಖಾಲಿ ಇದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಛತ್ತೀಸ್​ಗಢ ಲೋಕಸೇವಾ ಆಯೋಗದ ಅಧಿಕೃತ ವೆಬ್​ಸೈಟ್​ psc.cg.gov.in ಗೆ ಭೇಟಿ ನೀಡಬಹುದು.

ಒಟ್ಟು 386 ಸೀನಿಯರ್ ರೆಸಿಡೆಂಟ್ ಹುದ್ದೆಗಳು ಖಾಲಿ ಇವೆ. ಡಿಸೆಂಬರ್ 16ರಂದು ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಜನವರಿ 14, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ: AIISH Mysore Recruitment 2021: ಮೈಸೂರು ವಾಕ್​-ಶ್ರವಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಛತ್ತೀಸ್​ಗಢ ಲೋಕಸೇವಾ ಆಯೋಗ
ಹುದ್ದೆಯ ಹೆಸರುಸೀನಿಯರ್ ರೆಸಿಡೆಂಟ್
ಒಟ್ಟು ಹುದ್ದೆಗಳು386
ವಯೋಮಿತಿ25-35 ವರ್ಷ
ವೇತನಮಾಸಿಕ ₹ 67,300-2,13,100
ಅರ್ಜಿ ಸಲ್ಲಿಕೆ ಆರಂಭ ದಿನಾಂಕ16/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ14/01/2022ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/01/2022

ಇದನ್ನೂ ಓದಿ: IICT Recruitment 2021: ಪ್ರಾಜೆಕ್ಟ್​ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ ₹ 28,000

ವಯೋಮಿತಿ:
ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 25ರಿಂದ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 400 ರೂ. ಅರ್ಜಿ ಶುಲ್ಕ ಪಾವತಿಸಬೇಕು. SC/ST/OBC ವರ್ಗದ ಅಭ್ಯರ್ಥಿಗಳು 300 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ವೇತನ:
ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಮಾಸಿಕ ₹ 67,300- 2,13,100 ವೇತನ ನೀಡಲಾಗುತ್ತದೆ.
Published by:Latha CG
First published: