Chikkaballapur Anganawadi Recruitment 2021: 90 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 28ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್​ಸೈಟ್ anganwadirecruit.kar.nic.in ಗೆ ಭೇಟಿ ನೀಡಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Chikkaballapur Anganawadi Recruitment 2021: ಚಿಕ್ಕಬಳ್ಳಾಪುರ ಜಿಲ್ಲೆ(Chikkaballapur District)ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ(Women and Children Welfare Department) ಕಾರ್ಯ ನಿರ್ವಹಿಸುತ್ತಿರುವ 6 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ(Anganawadi Centers)ಗಳಲ್ಲಿ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 90 ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು ಖಾಲಿ ಇವೆ. 10ನೇ ತರಗತಿ, 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ನವೆಂಬರ್ 29ರವರೆಗೆ ಅರ್ಜಿ ಹಾಕಬಹುದು. ಅಕ್ಟೋಬರ್ 28ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್​ಸೈಟ್ anganwadirecruit.kar.nic.in ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.













































ಸಂಸ್ಥೆಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-ಚಿಕ್ಕಬಳ್ಳಾಪುರ
ಹುದ್ದೆಯ ಹೆಸರುಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ, ಮಿನಿ ಅಂಗನವಾಡಿ ಕಾರ್ಯಕರ್ತೆ
ಒಟ್ಟು ಹುದ್ದೆಗಳು90
ವಿದ್ಯಾರ್ಹತೆ10ನೇ ತರಗತಿ, 4ನೇ ತರಗತಿ ಉತ್ತೀರ್ಣ
ಕೆಲಸದ ಸ್ಥಳಚಿಕ್ಕಬಳ್ಳಾಪುರ
ವಯೋಮಿತಿ18-35 ವರ್ಷ
ವೇತನನಿಯಮಾನುಸಾರ
ಅರ್ಜಿ ಸಲ್ಲಿಸುವ ವಿಧಾನಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ28/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ29/11/2021

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/11/2021

ಇದನ್ನೂ ಓದಿ:Village Accountant Jobs: ಮಂಡ್ಯ, ರಾಮನಗರ ಸೇರಿ 10 ಜಿಲ್ಲೆಗಳಲ್ಲಿ ಗ್ರಾಮ ಲೆಕ್ಕಿಗ ಹುದ್ದೆಗಳ ಶೀಘ್ರ ಭರ್ತಿಗೆ ಆದೇಶ

ಹುದ್ದೆಯ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆ: 03 ಹುದ್ದೆಗಳು
ಮಿನಿ ಅಂಗನವಾಡಿ ಕಾರ್ಯಕರ್ತೆ: 03 ಹುದ್ದೆಗಳು
ಅಂಗನವಾಡಿ ಸಹಾಯಕಿ: 84 ಹುದ್ದೆಗಳು
ಒಟ್ಟು-90 ಹುದ್ದೆಗಳು

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 4ನೇ ತರಗತಿ/10ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ

  • ದಾಖಲಾತಿ ಪರಿಶೀಲನೆ

  • ವೈಯಕ್ತಿಕ ಸಂದರ್ಶನ


ಇದನ್ನೂ ಓದಿ:Karnataka Jobs: ಕರ್ನಾಟಕ ಖಾದಿ ಮಂಡಳಿಯಲ್ಲಿ ವಿವಿಧ ಹುದ್ದೆಗಳು ಖಾಲಿ; ತಿಂಗಳಿಗೆ ₹ 88,000 ಸಂಬಳ

ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.


ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

Published by:Latha CG
First published: