District Court Recruitment: ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ 34 ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ಟೆನೋಗ್ರಾಫರ್​​, ಟೈಪಿಸ್ಟ್​​ ಸೇರಿದಂತೆ ಒಟ್ಟು 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಚಿಕ್ಕಬಳ್ಳಾಪುರ  ಜಿಲ್ಲಾ ನ್ಯಾಯಾಲಯ

ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ

  • Share this:
    ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Chikkaballapur District Court)  ಘಟಕದ ವಿವಿಧ ನ್ಯಾಯಾಲಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಟೆನೋಗ್ರಾಫರ್​​, ಟೈಪಿಸ್ಟ್​​ ಸೇರಿದಂತೆ ಒಟ್ಟು 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್​ಲೈನ್​ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 27 ಆಗಿದೆ.

    ಸಂಸ್ಥೆ: ಚಿಕ್ಕಬಳ್ಳಾಪುರ ಇಕೋರ್ಟ್
    ಹುದ್ದೆ: ಪ್ಯೂನ್, ಸ್ಟೆನೋಗ್ರಾಫರ್, ಟೈಪಿಸ್ಟ್
    ಹುದ್ದೆಗಳ ಸಂಖ್ಯೆ: 34
    ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ - ಕರ್ನಾಟಕ
    ವೇತನ: 17000-52650ರೂ. ಪ್ರತಿ ತಿಂಗಳು







































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ಸ್ಟೆನೋಗ್ರಾಫರ್6ಪಿಯುಸಿ, ಡಿಪ್ಲೊಮಾ27650-52650 ರೂ ಮಾಸಿಕ
    ಟೈಪಿಸ್ಟ್1ಪಿಯುಸಿ, ಡಿಪ್ಲೊಮಾ21400-42000 ರೂ ಮಾಸಿಕ
    ಟೈಪಿಸ್ಟ್-ಕಾಪಿಸ್ಟ್2ಪಿಯುಸಿ, ಡಿಪ್ಲೊಮಾ21400-42000 ರೂ ಮಾಸಿಕ
    ಪ್ರೊಸೆಸ್​ ಸರ್ವರ್110ನೇ ತರಗತಿ19950-37900 ರೂ ಮಾಸಿಕ
    ಪ್ಯೂನ್2410ನೇ ತರಗತಿ17000-28950 ರೂ ಮಾಸಿಕ

    ವಯಸ್ಸಿನ ಮಿತಿ:  ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 05 ವರ್ಷಗಳು
    ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು

    ಅರ್ಜಿ ಶುಲ್ಕ:
    ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
    ಪ.ಜಾ, ಪ.ಪಂ, ಪ್ರವರ್ಗ 1, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ  ಅಭ್ಯರ್ಥಿಗಳು: 100 ರೂ
    ಸಾಮಾನ್ಯ ವರ್ಗದ ಅಭ್ಯರ್ಥಿಗಳು: 200 ರೂ

    ಇದನ್ನು ಓದಿ: ಚಳ್ಳಕೆರೆಯ ಐಐಎಸ್​ಸಿಯಲ್ಲಿ ಪ್ರಾಜೆಕ್ಟ್​ ಅಸಿಸ್ಟಂಟ್​ ಹುದ್ದೆಗೆ ಅರ್ಜಿ ಆಹ್ವಾನ

    ಪಾವತಿ ವಿಧಾನ: ಆನ್‌ಲೈನ್/ಚಲನ್

    ಆಯ್ಕೆ ಪ್ರಕ್ರಿಯೆ:
    ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29 ಜುಲೈ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಆಗಸ್ಟ್ 2022
    ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 30 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: districts.ecourts.gov.in

    ಇದನ್ನು ಓದಿ: ರೈಲ್ ಇಂಡಿಯಾದಲ್ಲಿದೆ ಅಪ್ರೆಂಟಿಸ್​ ಹುದ್ದೆ; ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜು.31

    ಅರ್ಜಿ ಸಲ್ಲಿಕೆ ಪ್ರಕ್ರಿಯೆ: 

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: