District Court Jobs: ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿದೆ ವಿವಿಧ ಹುದ್ದೆ; ಎಸ್​ಎಸ್​ಎಲ್​ಸಿ, ಪಿಯುಸಿ ಆಗಿದ್ರೆ ಅರ್ಜಿ ಸಲ್ಲಿಸಿ

ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನ ಸೆಪ್ಟೆಂಬರ್​ 15 ಆಗಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ (Chikkamagaluru District Court) ಘಟಕದ ವಿವಿಧ ನ್ಯಾಯಾಲಯಗಳನ್ನು ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಟೈಪಿಸ್ಟ್ (Typist)​, ಕಾಪಿಸ್ಟ್(Copyist)​, ಜವಾನ (Peon) ಸೇರಿದಂತೆ ಒಟ್ಟು 20 ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನ ಸೆಪ್ಟೆಂಬರ್​ 15 ಆಗಿದೆ.

    ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಚಿಕ್ಕಮಗಳೂರು ಇಕೋರ್ಟ್
    ಹುದ್ದೆಯ ಹೆಸರು: ಪ್ಯೂನ್, ಟೈಪಿಸ್ಟ್, ಟೈಪಿಸ್ಟ್-ಕಾಪಿಸ್ಟ್
    ಹುದ್ದೆಗಳ ಸಂಖ್ಯೆ: 20
    ಉದ್ಯೋಗ ಸ್ಥಳ: ಚಿಕ್ಕಮಗಳೂರು
    ವೇತನ: 17000-42000 ರೂ ಪ್ರತಿ ತಿಂಗಳು



























    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ಬೆರಳಚ್ಚುಗಾರರು7ಪಿಯುಸಿ21400-42000 ರೂ ಮಾಸಿಕ
    ಟೈಪಿಸ್ಟ್-ಕಾಪಿಸ್ಟ್1ಪಿಯುಸಿ21400-42000 ರೂ ಮಾಸಿಕ
    ಜವಾನ12ಎಸ್​ಎಸ್​ಎಲ್​ಸಿ17000-28950 ರೂ ಮಾಸಿಕ

    ವಯೋಮಿತಿ: ಚಿಕ್ಕಮಗಳೂರು ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ಇದನ್ನು ಓದಿ: ಡಿಆರ್​ಡಿಒದಲ್ಲಿ ಬೃಹತ್​ ನೇಮಕಾತಿ; ಐಟಿಐ, ಡಿಪ್ಲೊಮಾ ಆದವರಿಗೆ ಅವಕಾಶ

    ವಯೋಮಿತಿ ಸಡಿಲಿಕೆ:
    ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳು: 05 ವರ್ಷಗಳು
    ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 03 ವರ್ಷಗಳು

    ಅರ್ಜಿ ಶುಲ್ಕ:
    ಪ.ಜಾ, ಪ.ಪಂ, ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 150 ರೂ
    ಸಾಮಾನ್ಯ ಅಭ್ಯರ್ಥಿಗಳು: 300 ರೂ.

    ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್

    ಆಯ್ಕೆ ಪ್ರಕ್ರಿಯೆ:
    ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16 ಆಗಸ್ಟ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಸೆಪ್ಟೆಂಬರ್​ 2022
    ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 17 ಸೆಪ್ಟೆಂಬರ್​​ 2022

    ಇದನ್ನು ಓದಿ: ಬಿಇಎಲ್​ನಲ್ಲಿದೆ ಪ್ರಾಜೆಕ್ಟ್​ ಇಂಜಿನಿಯರ್​ ಹುದ್ದೆ; ಮಾಸಿಕ 55000 ರೂ ವೇತನ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್​ಗೆ ಇಲ್ಲಿ ಕ್ಲಿಕ್​ ಮಾಡಿ
    ಅಧಿಕೃತ ವೆಬ್‌ಸೈಟ್: districts.ecourts.gov.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ:

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ಸೇರಿದಂತೆ ಅಗತ್ಯ  ದಾಖಲೆಗಳನ್ನು ನೀಡಿ.

    -ನಿಮ್ಮ ವರ್ಗಕ್ಕೆ ಅನುಗುಣ ಆಗಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಲೋಡ್​ ಮಾಡಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: