ಚಿತ್ರದುರ್ಗ ಗ್ರಾಮ ಪಂಚಾಯತ್ (Chitradurga Gram Panchayat) ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಲೈಬ್ರರಿ ಮೇಲವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಆದ ಅಭ್ಯರ್ಥಿಗಳು ಈ ಹುದ್ದೆಗೆ ಅವಕಾಶ ಸಲ್ಲಿಸಬಹುದಾಗಿದೆ. ಅರ್ಜಿಯನ್ನ ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 4 ಆಗಿದೆ.
ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಿ ದುರ್ಗ ಮತ್ತು ಚಳ್ಳಕೆರೆ ತಾಲೂಕಿನ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಈ ಹುದ್ದೆ ಖಾಲಿ ಇದ್ದು, ತಾತ್ಕಾಲಿಕ ನೇಮಕಾತಿಗೆ ಗ್ರಾಮ ಪಂಚಾಯಿತಿ ಮುಂದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಥಳೀಯರಾಗಿರುವುದು ಕಡ್ಡಾಯವಾಗಿದೆ. ಈ ಹುದ್ದೆ ಕುರಿತು ವಿವರ, ಆಯ್ಕೆ ಪ್ರಕ್ರಿಯೆ, ನೇಮಕಾತಿ ಸೇರಿದಂತೆ ಇನ್ನಿತರ ಮಾಹಿತಿಗಳು ಕೆಳಕಂಡಂತೆ ಇದೆ.
ಸಂಸ್ಥೆಯ ಹೆಸರು: ಚಿತ್ರದುರ್ಗ ಗ್ರಾಮ ಪಂಚಾಯತ್
ಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕರು
ಹುದ್ದೆಗಳ ಸಂಖ್ಯೆ: ನಿರ್ದಿಷ್ಟಪಡಿಸಲಾಗಿಲ್ಲ
ಉದ್ಯೋಗ ಸ್ಥಳ: ಚಿತ್ರದುರ್ಗ
ವೇತನ: 12000 ರೂ ಪ್ರತಿ ತಿಂಗಳು
ಹುದ್ದೆ | ಕಾರ್ಯ ನಿರ್ವಹಣೆ ಸ್ಥಳ | ಮೀಸಲಾತಿ | ವಯೋಮಿತಿ |
ಗ್ರಂಥಾಲಯ ಮೇಲ್ವಿಚಾರಕರು | ಬಿ ದುರ್ಗ | ಪ್ರವರ್ಗ 3(ಎ) | ಕನಿಷ್ಠ 18ರಿಂದ ಗರಿಷ್ಠ 38 ವರ್ಷ |
ಗ್ರಂಥಾಲಯ ಮೇಲ್ವಿಚಾರಕರು | ಅಬ್ಬೇನಹಳ್ಳಿ | ಸಾಮಾನ್ಯ ವರ್ಗದ ಮಹಿಳಾ ಅಭ್ಯರ್ಥಿ | ಕನಿಷ್ಠ 18ರಿಂದ ಗರಿಷ್ಠ 35 ವರ್ಷ |
ಅರ್ಜಿ ಸಲ್ಲಿಕೆ
ಆಫ್ಲೈನ್
ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.
ಇದನ್ನು ಓದಿ: ಟಿಸಿಎಸ್ನಲ್ಲಿ ನೇಮಕಾತಿ; ಎಂಬಿಎ ಪದವೀಧರರಿಗೆ ಉತ್ತಮ ಅವಕಾಶ
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜೂನ್ 7, 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 4 , 2022
ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: chitradurga.nic.in
ಇದನ್ನು ಓದಿ: ಕರ್ನಾಟಕ ವೃಂದಕ್ಕೆ 51 ಹುದ್ದೆ ನಿಗದಿ; ಎಸ್ಎಸ್ಎಲ್ಸಿ, ಪಿಯುಸಿ ಆಗಿದ್ರೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ವಿಧಾನ
-ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
-ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ ಅರ್ಜಿ ಭರ್ತಿ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಈ ಕೆಳಕಂಡ ವಿಳಾಸಕ್ಕೆ ಖುದ್ದು ನೀಡಬೇಕು.
ವಿಳಾಸ
ಪಿಡಿಒ/ಪಂಚಾಯತ್ ಕಾರ್ಯದರ್ಶಿ, ಮುಖ್ಯ ಗ್ರಂಥಾಲಯ ಅಧಿಕಾರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಚಿತ್ರದುರ್ಗ, ಕರ್ನಾಟಕ ಪಿಡಿಒ/ಪಂಚಾಯತ್ ಕಾರ್ಯದರ್ಶಿ, ಮುಖ್ಯ ಗ್ರಂಥಾಲಯ ಅಧಿಕಾರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಚಿತ್ರದುರ್ಗ.
ಅರ್ಜಿಯಲ್ಲಿ ಲಗತ್ತಿಸಬೇಕಾದ ದಾಖಲಾತಿ
ಎಸ್ಎಸ್ಎಲ್ಸಿ ಅಂಕಪಟ್ಟಿ
ಟಿಸಿ,
ಮೀಸಲಾತಿ ಪ್ರಮಾಣ ಪತ್ರ
ಸ್ಥಳೀಯ ವಾಸಿ ದೃಢೀಕರಣ ಪತ್ರ
ವಿಕಚೇತನರಾಗಿದ್ದರೆ ಈ ಕುರಿತ ಪ್ರಮಾಣ ಪತ್ರ
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೇಂದ್ರ ಗ್ರಂಥಾಲಯವನನು ಸಂಪರ್ಕಿಸಬಹುದಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ