Jobs in Chitradurga ZP Office: ಚಿತ್ರದುರ್ಗ ಜಿಲ್ಲಾ ಪಂಚಾಯತ್​ನಲ್ಲಿದೆ ಉದ್ಯೋಗಾವಕಾಶ; ಪಿಯುಸಿ, ಡಿಗ್ರಿ ಆದವರಿಗೆ ಅವಕಾಶ

ನರೇಗಾ ಯೋಜನೆಯನ್ನು ಪರಿಣಾಕಾರಿಯಾಗಿ ಅನುಷ್ಟಾನಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆಯಿಂದ ಈ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ.

ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಿ

 • Share this:
  ಚಿತ್ರದುರ್ಗ ಜಿಲ್ಲಾ ಪಂಚಾಯತ್​ನಲ್ಲಿ (Chitradurga Zilla Panchayat)  ವಿವಿಧ ಹುದ್ದೆಗೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಪರಿಣಾಕಾರಿಯಾಗಿ ಅನುಷ್ಟಾನಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆಯಿಂದ ಈ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಡಾಟಾ ಎಂಟ್ರಿ ಸೇರಿದಂತೆ ವಿವಿಧ ಒಟ್ಟು 10 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 8 ಆಗಿದೆ.

  ಈ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ. ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

  ಸಂಸ್ಥೆಯ ಹೆಸರು: ಚಿತ್ರದುರ್ಗ ಜಿಲ್ಲಾ ಪಂಚಾಯತ್
  ಹುದ್ದೆಯ ಹೆಸರು: ಡಾಟಾ ಎಂಟ್ರಿ ಆಪರೇಟರ್​​, ಟೆಕ್ನಿಕಲ್ ಅಸಿಸ್ಟೆಂಟ್
  ಹುದ್ದೆಗಳ ಸಂಖ್ಯೆ: 10
  ಉದ್ಯೋಗ ಸ್ಥಳ: ಚಿತ್ರದುರ್ಗ
  ವೇತನ: 18,000 – 29,000 ರೂ ಪ್ರತಿ ತಿಂಗಳು

  ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
  ಡಾಟಾ ಎಂಟ್ರಿ ಆಪರೇಟರ್‌ಗಳು6ಪಿಯುಸಿ17,000 ರೂ ಮಾಸಿಕ
  ಆಡಳಿತ ಸಹಾಯಕ1ಬಿಕಾಂ ಪದವಿ18,000 ರೂ ಮಾಸಿಕ
  ತಾಂತ್ರಿಕ ಸಂಯೋಜಕರು1ಸಿವಿಲ್​ನಲ್ಲಿ ಬಿಇ, ಬಿಟೆಕ್​29,000 ರೂ ಮಾಸಿಕ
  ತಾಂತ್ರಿಕ ಸಹಾಯಕ (ಅರಣ್ಯ)2ಅರಣ್ಯಶಾಸ್ತ್ರದಲ್ಲಿ ಬಿಎಸ್ಸಿ24,000ರೂ ಮಾಸಿಕ

  ವಿಶೇಷ ಸೂಚನೆ:
  ಡೇಟಾ ಎಂಟ್ರಿ ಆಪರೇಟರ್​ ಮತ್ತು ಆಡಳಿತ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್​ ಟೈಪಿಂಗ್​ ಪರಿಣಿತಿ ಹೊಂದಿರಬೇಕು.

  ತಾಂತ್ರಿಕ ಸಂಯೋಜಕರ ಹುದ್ದೆಗೆ ಈಗಾಗಲೇ ನರೇಗಾ ಯೋಜನೆ ಅಡಿಯಲ್ಲಿ 5 ವರ್ಷ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ.

  ಇದನ್ನು ಓದಿ: ಮೈಸೂರಿನ ವಾಕ್ ಮತ್ತು​ ಶ್ರವಣ ಸಂಸ್ಥೆಯಲ್ಲಿದೆ ಅಕೌಂಟೆಂಟ್​ ಹುದ್ದೆ

  ವಯೋಮಿತಿ: ಚಿತ್ರದುರ್ಗ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

  ವಯೋಮಿತಿ ಸಡಿಲಿಕೆ
  ಪ.ಜಾ, ಪ.ಪಂ ಮತ್ತು ಪ್ರವರ್ಗ-1 ಅಭ್ಯರ್ಥಿಗಳು: 5 ವರ್ಷ
  ಹಿಂದುಳಿದ ವರ್ಗದ ಅಭ್ಯರ್ಥಿಗಳು: 3 ವರ್ಷ

  ಅರ್ಜಿ ಸಲ್ಲಿಕೆ
  ಆನ್​ಲೈನ್​ ಮೂಲಕ

  ಅರ್ಜಿ ಶುಲ್ಕ:
  ಅರ್ಜಿ ಶುಲ್ಕ ವಿನಾಯಿತಿ

  ಆಯ್ಕೆ ಪ್ರಕ್ರಿಯೆ:
  ಸಂದರ್ಶನ

  ಪ್ರಮುಖ ದಿನಾಂಕಗಳು:
  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24 ಆಗಸ್ಟ್​​ 2022
  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08 ಸೆಪ್ಟೆಂಬರ್​ 2022

  ಅಧಿಸೂಚನೆ ಪ್ರಮುಖ ಲಿಂಕ್‌ಗಳು
  ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
  ಅಧಿಕೃತ ವೆಬ್‌ಸೈಟ್: chitradurga.nic.in

  ಇದನ್ನು ಓದಿ: ಪಿಯು ಉಪನ್ಯಾಸಕರ ನೇಮಕಾತಿ; ಇಲ್ಲಿದೆ ಹುದ್ದೆಯ ಸಂಪೂರ್ಣ ಮಾಹಿತಿ

  ಅರ್ಜಿ ಸಲ್ಲಿಕೆ ಪ್ರಕ್ರಿಯೆ

  ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

  ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

  ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

  ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ

  ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು 08194-223058ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ.
  Published by:Seema R
  First published: