• Home
  • »
  • News
  • »
  • jobs
  • »
  • NIMHANS Recruitment: ನಿಮ್ಹಾನ್ಸ್​ನಲ್ಲಿದೆ ಒಪ್ಪಂದ ಆಧಾರಿತ ಉದ್ಯೋಗ; ಬೇಗ ಅರ್ಜಿ ಸಲ್ಲಿಸಿ

NIMHANS Recruitment: ನಿಮ್ಹಾನ್ಸ್​ನಲ್ಲಿದೆ ಒಪ್ಪಂದ ಆಧಾರಿತ ಉದ್ಯೋಗ; ಬೇಗ ಅರ್ಜಿ ಸಲ್ಲಿಸಿ

ಕೆಲಸ ಖಾಲಿ ಇದೆ

ಕೆಲಸ ಖಾಲಿ ಇದೆ

ಈ ಹುದ್ದೆಯನ್ನು ಒಂದು ವರ್ಷಗಳ ಕಾಲ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ.

  • Share this:

    ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ (National Institute of Mental Health and Neuro Sciences) ಸೈಕಿಯಾಟ್ರಿಕ್ ಸೋಶಿಯಲ್ ವರ್ಕರ್ (Psychiatric Social Worker) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಎರಡು ಹುದ್ದೆಗಳು ಖಾಲಿ ಇದ್ದು, ಇದರ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಸೈಕಿಯಾಟ್ರಿಕ್​ ಪದವಿ ಅಥವಾ ಎಂಎಸ್​ಡಬ್ಲ್ಯೂ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 20 ಆಗಿದೆ. ಅಭ್ಯರ್ಥಿಗಳು ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


    ಈ ಹುದ್ದೆಯನ್ನು ಒಂದು ವರ್ಷಗಳ ಕಾಲ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಪ್ರಾರಂಭಿಕವಾಗಿ ಆರು ತಿಂಗಳ ಅವಧಿ ಆಗಿದ್ದು, ಅಭ್ಯರ್ಥಿಗಳ ಕಾರ್ಯ ಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆ ಮಾಡಲಾಗುವುದು. ಈ ಹುದ್ದೆ ನೇಮಕಾತಿ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.

    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)
    ಹುದ್ದೆಸೈಕಿಯಾಟ್ರಿಕ್ ಸೋಶಿಯಲ್ ವರ್ಕರ್
    ಹುದ್ದೆಗಳ ಸಂಖ್ಯೆ2
    ಉದ್ಯೋಗ ಸ್ಥಳಬೆಂಗಳೂರು
    ವೇತನ38440 ರೂ. ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸೈಕಿಯಾಟ್ರಿಕ್ ಸೋಶಿಯಲ್ ವರ್ಕ್ ನಲ್ಲಿ ಎಂಫಿಲ್​ ಅಥವಾ ಎಂಎಸ್​ಡಬ್ಲ್ಯೂ ಪೂರ್ಣಗೊಳಿಸಿರಬೇಕು.
    ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು.


    ವಯೋಮಿತಿ ಸಡಿಲಿಕೆ:
    ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಿಯಮದ ಪ್ರಕಾರ


    ಇದನ್ನು ಓದಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿದೆ ಉದ್ಯೋಗ; ಇಲ್ಲಿದೆ ಮಾಹಿತಿ


    ಅರ್ಜಿ ಸಲ್ಲಿಕೆ
    ಇಮೇಲ್​ ಮುಖಾಂತರ


    ಇಮೇಲ್​ ವಿಳಾಸ: homesstudyprs@gmail.com


    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ


    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 06 ಜುಲೈ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 20 ಜುಲೈ 2022


    ಇದನ್ನು ಓದಿ: ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವಾರ್ಡನ್​ ಹುದ್ದೆಗೆ ಅಧಿಸೂಚನೆ


    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ವೆಬ್‌ಸೈಟ್: nimhans.ac.in


    ಅರ್ಜಿ ಸಲ್ಲಿಕೆ ವಿಧಾನ


    ಸಂಸ್ಥೆ ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.


    ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.


    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸುವ ಬಟನ್​ ಕ್ಲಿಕ್​ ಮಾಡಬೇಕು

    Published by:Seema R
    First published: