• Home
  • »
  • News
  • »
  • jobs
  • »
  • Jobs in Vijayanagar: ವಿಜಯನಗರ ಡಿಸಿ ಕಚೇರಿಯಲ್ಲಿದೆ ಹುದ್ದೆ; ಇಲ್ಲಿದೆ ಸಂಪೂರ್ಣ ಮಾಹಿತಿ

Jobs in Vijayanagar: ವಿಜಯನಗರ ಡಿಸಿ ಕಚೇರಿಯಲ್ಲಿದೆ ಹುದ್ದೆ; ಇಲ್ಲಿದೆ ಸಂಪೂರ್ಣ ಮಾಹಿತಿ

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

ಕರ್ನಾಟಕ ಗಣಿ ಪುರಶ್ಚೇತನ ನಿಗಮದ ಅಡಿಯಲ್ಲಿ ವಿವಿಧ ಯೋಜನೆಗಳ ನಿರ್ವಹಣೆಗೆ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳ ಭರ್ತಿ ಮಾಡಲಾಗುವುದು

  • Share this:

    ವಿಜಯನಗರ ಜಿಲ್ಲಾಧಿಕಾರಿ (Vijayanagar District Office) ಕಚೇರಿಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಟೀಮ್​ ಲೀಡರ್​ ಮತ್ತು ಎಂ ಮತ್ತು ಇ ಎಕ್ಸ್​ಪರ್ಟ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 11 ಆಗಿದೆ.


    ಕರ್ನಾಟಕ ಗಣಿ ಪುರಶ್ಚೇತನ ನಿಗಮದ ಅಡಿಯಲ್ಲಿ ವಿವಿಧ ಯೋಜನೆಗಳ ನಿರ್ವಹಣೆಗೆ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳ ಭರ್ತಿ ಮಾಡಲಾಗುವುದು. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.


    ಸಂಸ್ಥೆಯ ಹೆಸರು: ಜಿಲ್ಲಾಧಿಕಾರಿ ಕಚೇರಿ ವಿಜಯನಗರ
    ಹುದ್ದೆಯ ಹೆಸರು: ಟೀಮ್ ಲೀಡರ್, ಎಂ ಅಂಡ್​​ ಇ ಎಕ್ಸ್ಪರ್ಟ್
    ಹುದ್ದೆಗಳ ಸಂಖ್ಯೆ: 3
    ಉದ್ಯೋಗ ಸ್ಥಳ: ವಿಜಯನಗರ
    ಸಂಬಳ: 25000-50000 ರೂ ಪ್ರತಿ ತಿಂಗಳು

    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿವೇತನ
    ಟೀಮ್​ ಲೀಡರ್​​1ಡಿಪ್ಲೊಮಾ, ಸಿವಿಲ್​ನಲ್ಲಿ ಬಿಇ ಪದವಿಕನಿಷ್ಟ55- ಗರಿಷ್ಟ 70 ವರ್ಷ40000-50000ರೂ ಮಾಸಿಕ
    ಸಾಮಾಜಿಕ ಅಭಿವೃದ್ಧಿ ಅಧಿಕಾರಿ1ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಪದವಿಕನಿಷ್ಟ23- ಗರಿಷ್ಟ 30 ವರ್ಷ25000 ರೂ ಮಾಸಿಕ
    ಎಂ ಅಂಡ್ಇ​​ ತಜ್ಞರು1ಸ್ನಾತಕೋತ್ತರ ಪದವಿಕನಿಷ್ಟ23- ಗರಿಷ್ಟ 30 ವರ್ಷ25000 ರೂ ಮಾಸಿಕ

    ಅನುಭವದ ವಿವರಗಳು
    ತಂಡದ ನಾಯಕ: ಅಭ್ಯರ್ಥಿಗಳು ಎಇಇ ಆಗಿ 05 ವರ್ಷಗಳ ಅನುಭವವನ್ನು ಹೊಂದಿರಬೇಕು
    ಸಾಮಾಜಿಕ ಅಭಿವೃದ್ಧಿ ಅಧಿಕಾರಿ, ಎಂ ಅಂಡ್ಇ​​ ತಜ್ಞರು : ಅಭ್ಯರ್ಥಿಗಳು ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 01 ವರ್ಷಗಳ ಅನುಭವವನ್ನು ಹೊಂದಿರಬೇಕು.


    ಇದನ್ನು ಓದಿ: ಮನಶಾಸ್ತ್ರದಲ್ಲಿ ಪದವಿ ಆದವರಿಗೆ ಉದ್ಯೋಗಾವಕಾಶ; ಮಾಸಿಕ 88000 ರೂ ವರೆಗೆ ವೇತನ


    ಅರ್ಜಿ ಸಲ್ಲಿಕೆ: ಆನ್​ಲೈನ್​


    ಅರ್ಜಿ ಶುಲ್ಕ: ವಿನಾಯಿತಿ


    ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ


    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26 ಸೆಪ್ಟೆಂಬರ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 ಅಕ್ಟೋಬರ್ 2022


     ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: vijayanagara.nic.in


    ಇದನ್ನು ಓದಿ: ಇಎಸ್​ಐಸಿಯಲ್ಲಿ ಸೀನಿಯರ್​ ರೆಸಿಡೆಂಟ್​ ಹುದ್ದೆಗೆ ನೇರ ಸಂದರ್ಶನ


    ಅರ್ಜಿ ಸಲ್ಲಿಕೆ ವಿಧಾನ


    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.


    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ


    ಅರ್ಜಿ ಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.


    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ.

    Published by:Seema R
    First published: