ಕಲ್ಬುರ್ಗಿಯ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ (Central University of Karnataka) ಪ್ರಾಧ್ಯಾಪಕ ಹುದ್ದೆಗೆ ಅರಜಿ ಆಹ್ವಾನಿಸಲಾಗಿದೆ. 61 ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್ಲೈನ್ ಮತ್ತು ಆನ್ಲೈನ್ ಎರಡು ವಿಧಾನದ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 30 ಆಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆಯ ಹೆಸರು: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (CUK)
ಹುದ್ದೆಗಳ ಸಂಖ್ಯೆ: 61
ಉದ್ಯೋಗ ಸ್ಥಳ: ಕಲಬುರಗಿ
ಹುದ್ದೆಯ ಹೆಸರು: ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ
ವೇತನ: ವಿಶ್ವ ವಿದ್ಯಾಲಯದಲ ನಿಯಮಗಳ ಪ್ರಕಾರ
ಹುದ್ದೆಗಳು ಹುದ್ದೆ ಸಂಖ್ಯೆ
ಹುದ್ದೆ |
ಹುದ್ದೆ ಸಂಖ್ಯೆ |
ಪ್ರಾಧ್ಯಾಪಕ |
21 |
ಸಹಾಯಕ ಪ್ರಾಧ್ಯಾಪಕ |
40 |
ವೇತನ: ಕೇಂದ್ರಿಕ ವಿಶ್ವವಿದ್ಯಾಲಯ ನಿಯಮ ಅನುಸಾರ 7 ನೇ ವೇತನ ಆಯೋಗದ ಪ್ರಕಾರ ಯುಜಿಸಿಯ ಪ್ರಕಾರ ವೇತನದ ಪರಿಷ್ಕರಣೆಗೆ ಒಳಪಟ್ಟಿರುತ್ತದೆ
ವಿದ್ಯಾರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಸಿಎ/ಐಸಿಡಬ್ಲ್ಯೂಎ, ಬಿಎಡ್, ಪದವಿ, ಡಾಕ್ಟರಲ್ ಪದವಿ, ಎಂಕಾಂ, ಎಂಎಡ್, ಪಿಜಿಡಿಎಂ, ಎಂಎ, ಕಲೆ/ಮಾನವೀಯತೆ/ವಿಜ್ಞಾನ/ಕಾಮರ್ಸ್ನಲ್ಲಿ ಸ್ನಾತಕೋತ್ತರ ಪದವಿ, ಎಂಎಡ್, ಎಂಎ ಪೂರ್ಣಗೊಳಿಸಿರಬೇಕು .ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪ್ರವಾಸೋದ್ಯಮ/ ವ್ಯಾಪಾರ ಆಡಳಿತದಲ್ಲಿ ಪಿಎಚ್ಡಿ ಪದವಿಗಳಿಸಿರಬೇಕು.
UGC/MoE/DOPT/NCTE/AICTE ಮತ್ತು ಇತರರಿಂದ ಸೂಚಿಸಲ್ಪಟ್ಟಿರುವ ಅಂಶಗಳು ಅನುಸಾರ ಅಭ್ಯರ್ಥಿಗಳು ವಿದ್ಯಾರ್ಹತೆ ಹೊಂದಿರಬೇಕು
ಆಯ್ಕೆ ಪ್ರಕ್ರಿಯೆ
ಸಂದರ್ಶನ
ಅರ್ಜಿ ಸಲ್ಲಿಕೆ
ಆನ್ಲೈನ್
ಆನ್ಲೈನ್ ಮೋಡ್ನಲ್ಲಿ ಲಭ್ಯವಿರುವಂತೆ ಅರ್ಜಿ ನಮೂನೆಗಳನ್ನು ಮಾತ್ರ ಭರ್ತಿ ಮಾಡಬೇಕು. ಯಾವುದೇ ಆಫ್ಲೈನ್ ಫಾರ್ಮ್ಗಳನ್ನು ಸ್ವೀಕರಿಸಲಾಗುವುದಿಲ್ಲ.
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ 2,500 ರೂ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 1000 ರೂ
ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮೇ 30, 20222
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜೂನ್ 2022
ಹಾರ್ಡ್ ಕಾಪಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ಜುಲೈ 8, 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ವೀಕ್ಷಣೆಗೆ:
ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
cuk.ac.in.
ಇದನ್ನು ಓದಿ: ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ 33 ಹುದ್ದೆಗೆ ಅರ್ಜಿ ಆಹ್ವಾನ
ವಿಶೇಷ ಸೂಚನೆ
ಅರ್ಜಿ ಭರ್ತಿ ಮಾಡಿದ ಬಳಿಕ ಹಾರ್ಡ್ ಕಾಪಿಯನ್ನು ಕೆಳಕಂಡ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು
mhc.tn.gov.in ಅಧಿಕೃತ ವೆಬ್ಸೈಟ್ನಲ್ಲಿ ಜೂನ್ 30ರೊಳಗ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ಆನ್ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜುಲೈ 8ರೊಳಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ರಿಜಿಸ್ಟ್ರಾರ್, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಕಡಗಂಚಿ, ಆಳಂದ ರಸ್ತೆ, ಕಲಬುರಗಿ ಜಿಲ್ಲೆ -585367
ಇದನ್ನು ಓದಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಪ್ರಕ್ರಿಯೆ
-ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
-ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
-ಮೇಲಿನ ಲಿಂಕ್ನಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ. ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
-ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
ಕೊನೆಯದಾಗಿ ಅರ್ಜಿ ನಮೂನೆಯನ್ನು ಸೂಚಿಸಲಾದ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ ಮೂಲಕ ಕಳುಹಿಸಬಹುದಾಗಿದೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ