CUK Recruitment: ಕರ್ನಾಟಕ ಕೇಂದ್ರಿಯ ವಿವಿಯಲ್ಲಿ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿ

ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಸಾಂಕೇತಿಕ ಚಿತ್ರ

ಸಾಂಕೇತಿಕ ಚಿತ್ರ

  • Share this:
    ಕಲ್ಬುರ್ಗಿಯ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ (Central University of Karnataka)  ಪ್ರಾಧ್ಯಾಪಕ ಹುದ್ದೆಗೆ ಅರಜಿ ಆಹ್ವಾನಿಸಲಾಗಿದೆ. 61 ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್​ಲೈನ್ ಮತ್ತು ಆನ್​ಲೈನ್​ ಎರಡು ವಿಧಾನದ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​ 30 ಆಗಿದೆ

    ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (CUK)
    ಹುದ್ದೆಗಳ ಸಂಖ್ಯೆ: 61
    ಉದ್ಯೋಗ ಸ್ಥಳ: ಕಲಬುರಗಿ
    ಹುದ್ದೆಯ ಹೆಸರು: ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ
    ವೇತನ: ವಿಶ್ವ ವಿದ್ಯಾಲಯದಲ ನಿಯಮಗಳ ಪ್ರಕಾರ















    ಹುದ್ದೆಹುದ್ದೆ ಸಂಖ್ಯೆ
    ಪ್ರಾಧ್ಯಾಪಕ21
    ಸಹಾಯಕ ಪ್ರಾಧ್ಯಾಪಕ40

    ವೇತನ: ಕೇಂದ್ರಿಕ ವಿಶ್ವವಿದ್ಯಾಲಯ ನಿಯಮ ಅನುಸಾರ 7 ನೇ ವೇತನ ಆಯೋಗದ ಪ್ರಕಾರ ಯುಜಿಸಿಯ ಪ್ರಕಾರ ವೇತನದ ಪರಿಷ್ಕರಣೆಗೆ ಒಳಪಟ್ಟಿರುತ್ತದೆ

    ಇದನ್ನು ಓದಿ: ಬಾಗಲಕೋಟೆ ತೋಟಗಾರಿಕಾ ವಿವಿಯಲ್ಲಿ ನೇಮಕಾತಿ; ಬೇಗ ಅರ್ಜಿ ಸಲ್ಲಿಸಿ

    ವಿದ್ಯಾರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಸಿಎ/ಐಸಿಡಬ್ಲ್ಯೂಎ, ಬಿಎಡ್, ಪದವಿ, ಡಾಕ್ಟರಲ್ ಪದವಿ, ಎಂಕಾಂ, ಎಂಎಡ್​, ಪಿಜಿಡಿಎಂ, ಎಂಎ, ಕಲೆ/ಮಾನವೀಯತೆ/ವಿಜ್ಞಾನ/ಕಾಮರ್ಸ್‌ನಲ್ಲಿ ಸ್ನಾತಕೋತ್ತರ ಪದವಿ, ಎಂಎಡ್​​, ಎಂಎ ಪೂರ್ಣಗೊಳಿಸಿರಬೇಕು .ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪ್ರವಾಸೋದ್ಯಮ/ ವ್ಯಾಪಾರ ಆಡಳಿತದಲ್ಲಿ ಪಿಎಚ್​ಡಿ ಪದವಿಗಳಿಸಿರಬೇಕು.

    UGC/MoE/DOPT/NCTE/AICTE ಮತ್ತು ಇತರರಿಂದ ಸೂಚಿಸಲ್ಪಟ್ಟಿರುವ ಅಂಶಗಳು ಅನುಸಾರ ಅಭ್ಯರ್ಥಿಗಳು ವಿದ್ಯಾರ್ಹತೆ ಹೊಂದಿರಬೇಕು

    ಆಯ್ಕೆ ಪ್ರಕ್ರಿಯೆ
    ಸಂದರ್ಶನ

    ಅರ್ಜಿ ಸಲ್ಲಿಕೆ
    ಆನ್​​ಲೈನ್​

    ಅರ್ಜಿ ಶುಲ್ಕ
    ಸಾಮಾನ್ಯ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ 2,500 ರೂ
    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 1000 ರೂ
    ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮೇ 30, 20222
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜೂನ್ 2022
    ಹಾರ್ಡ್ ಕಾಪಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ಜುಲೈ 8, 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ವೀಕ್ಷಣೆಗೆ: ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: cuk.ac.in.

    ಇದನ್ನು ಓದಿ: ಬ್ಯಾಂಕಿಂಗ್​ನಲ್ಲಿ ಭರ್ಜರಿ ನೇಮಕಾತಿ; 8106 ಹುದ್ದೆಗಳಿಗೆ ನೇಮಕಾತಿ

    ಅರ್ಜಿ ಸಲ್ಲಿಕೆ

    -ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
    -ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
    -ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಸ್ವಯಂ ದೃಢೀಕರಣದೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸ್ಪೀಡ್​ ಪೋಸ್ಟ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ಕಳುಹಿಸಬೇಕಿದೆ.

    ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಕಡಗಂಚಿ, ಆಳಂದ ರಸ್ತೆ, ಕಲಬುರಗಿ ಜಿಲ್ಲೆ -585367
    Published by:Seema R
    First published: