DDA Recruitment 2022: ತಿಂಗಳಿಗೆ ₹ 65,000 ಸಂಬಳ, ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಜನವರಿ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
DDA Recruitment 2022: ದೆಹಲಿ ಅಭಿವೃದ್ಧಿ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಕನ್ಸಲ್ಟೆಂಟ್ ಪೋಸ್ಟ್​​​ಗಳು(Consultant posts) ಖಾಲಿ ಇದ್ದು, ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ dda.org.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆದೆಹಲಿ ಅಭಿವೃದ್ಧಿ ಪ್ರಾಧಿಕಾರ
ಹುದ್ದೆಯ ಹೆಸರುಕನ್ಸಲ್ಟೆಂಟ್
ಒಟ್ಟು ಹುದ್ದೆಗಳು5
ವಿದ್ಯಾರ್ಹತೆಪದವಿ ಹಾಗೂ ಸ್ನಾತಕೋತ್ತರ ಪದವಿ
ವೇತನಮಾಸಿಕ ₹ 45,000- 65,000
ಉದ್ಯೋಗದ ಸ್ಥಳನವದೆಹಲಿ
ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ21/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ05/02/2022



ಹುದ್ದೆಯ ಮಾಹಿತಿ:
ಕನ್ಸಲ್ಟೆಂಟ್ (ಸೀನಿಯರ್ ಲ್ಯಾಂಡ್​ಸ್ಕೇಪ್​ ಆರ್ಕಿಟೆಕ್ಟ್​) -02
ಕನ್ಸಲ್ಟೆಂಟ್ (ಲ್ಯಾಂಡ್​ಸ್ಕೇಪ್​ ಆರ್ಕಿಟೆಕ್ಟ್​​)-03
ಒಟ್ಟು 5 ಹುದ್ದೆಗಳು

ಇದನ್ನೂ ಓದಿ: BOB Recruitment 2022: ಬ್ಯಾಂಕ್ ಆಫ್ ಬರೋಡಾದಲ್ಲಿ 220 ಹುದ್ದೆಗಳು ಖಾಲಿ, ಪದವೀಧರರು ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ:
ದೆಹಲಿ ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಉದ್ಯೋಗದ ಸ್ಥಳ:
ದೆಹಲಿ ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದೆಹಲಿಯಲ್ಲಿ ಉದ್ಯೋಗ ನೀಡಲಾಗಿದೆ.

ವೇತನ:
ದೆಹಲಿ ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 45,000- 65,000 ವೇತನ ನೀಡಲಾಗುತ್ತದೆ.

ಇದನ್ನೂ ಓದಿ: KPTCL Recruitment 2022: 1492 ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ₹ 73,000 ಸಂಬಳ, ಈಗಲೇ Apply ಮಾಡಿ

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/02/2022
Published by:Latha CG
First published: