ಕರ್ನಾಟಕ ಕೈಮಗ್ಗ ಮತ್ತು ಜವಳಿ ಇಲಾಖೆ ಅಡಿ (Department of Handlooms and Textiles) ಬೆಂಗಳೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಸಿಇಒ, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 33 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳು ಗುತ್ತಿಗೆ ಆಧಾರಿತವಾಗಿದೆ. 24 ತಿಂಗಳುಗಳ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಗುತ್ತಿಗೆ ಆಧಾರದ ಮೇಲೆ ಕರ್ನಾಟಕ ಕೈ ಮಗ್ಗ ಮತ್ತು ಜವಳಿ ಇಲಾಖೆ ಅಡಿ ಕರೆಯಲಾದ ಹುದ್ದೆ ಕುರಿತ ಮಾಹಿತ ಇಲ್ಲಿದೆ.
ಕರ್ನಾಟಕ ಕೈಮಗ್ಗ ಮತ್ತು ಜವಳಿ ಇಲಾಖೆ
ಹುದ್ದೆಗಳ ಸಂಖ್ಯೆ: 33
ಉದ್ಯೋಗ ಸ್ಥಳ: ಬೆಂಗಳೂರು - ಚಿಕ್ಕಬಳ್ಳಾಪುರ - ಚಾಮರಾಜನಗರ
ಹುದ್ದೆಯ ಹೆಸರು: ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿ
ವೇತನ: 6500-23000 ರೂ ಮಾಸಿಕ
ಹುದ್ದೆಗಳು | ಹುದ್ದೆ ಸಂಖ್ಯೆ | ವೇತನ |
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) | 11 | 23000 ರೂ ಮಾಸಿಕ |
ಸ್ಥಳೀಯ ಸಂಪನ್ಮೂಲ ವ್ಯಕ್ತಿ (LRP) | 22 | 6500 ರೂ ಮಾಸಿಕ |
ವಯಸ್ಸಿನ ಮಿತಿ: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಇಲಾಖೆಯ ಕರ್ನಾಟಕ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು
ವಯಸ್ಸಿನ ಸಡಿಲಿಕೆ:
ಕೈಮಗ್ಗ ಮತ್ತು ಜವಳಿ ಇಲಾಖೆಯ ಕರ್ನಾಟಕ ನಿಯಮಗಳ ಪ್ರಕಾರ
ಆಯ್ಕೆ ಪ್ರಕ್ರಿಯೆ
ಮೆರಿಟ್ ಪಟ್ಟಿ
ಅರ್ಜಿ ಸಲ್ಲಿಕೆ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದಾಗಿದೆ.
ಇದನ್ನು ಓದಿ: ವಿಧಾನಸಭೆ ಸಚಿವಾಲಯದಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ; ಇಲ್ಲಿದೆ ಸಂಪೂರ್ಣ ಮಾಹಿತಿ
ಜಂಟಿ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ದಕ್ಷಿಣ ವಿಭಾಗ/ವಲಯ, ನಂ. 39/2, 4 ನೇ ಮಹಡಿ, A.S.V.N.V ಭವನ, ಕೆಂಪೇಗೌಡ ರಸ್ತೆ, ಬೆಂಗಳೂರು - 560009
ಅರ್ಜಿಯನ್ನು ಜೂನ್ 3ರೊಳಗೆ ಸಲ್ಲಿಸಬೇಕಿದೆ.
ಅಧಿಕೃತ ವೆಬ್‌ಸೈಟ್: karnatakadht.org
ಅನುಭವ: ಟೆಕ್ಸ್ಟೈಲ್ ಪ್ರೊಡಕ್ಷನ್ ಮತ್ತು ಮಾರ್ಕೆಟಿಂಗ್ನಲ್ಲಿ ಎಲ್ಲಾ ಡಿಪ್ಲೊಮಾ ಕೋರ್ಸ್ ಅಭ್ಯರ್ಥಿಗಳಿಗೆ 4 ವರ್ಷಗಳು, ಪದವಿ ಅಭ್ಯರ್ಥಿಗಳಿಗೆ 3 ವರ್ಷಗಳು, ಸ್ನಾತಕೋತ್ತರ ಮತ್ತು ಮಾಸ್ಟರ್ ಡಿಗ್ರಿ ಅಭ್ಯರ್ಥಿಗಳಿಗೆ 1 ವರ್ಷದ ಅನುಭವ ಕಡ್ಡಾಯವಾಗಿದೆ.
ಇದನ್ನು ಓದಿ: ದೂರ ಸಂಪರ್ಕ ಇಲಾಖೆಯಲ್ಲಿದೆ ಕೆಲಸ ಖಾಲಿ; ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಕೈ ಮಗ್ಗ ಮತ್ತು ಜವಳಿ ಇಲಾಖೆಯ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ. ಅಭ್ಯರ್ಥಿಯು ಅರ್ಹತಾ ಮಾನದಂಡಗಳ ಬಗ್ಗೆ ಖಚಿತಪಡಿಸಿಕೊಳ್ಳಿ.
-ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸೇರಿಸಿ
-ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
- ಕೊನೆಯದಾಗಿ ಅರ್ಜಿ ನಮೂನೆಯನ್ನು ಮೇಲ್ಕಂಡ ವಿಳಾಸಕ್ಕೆ ಜೂನ್ 3ರೊಳಗೆ ಕಳುಹಿಸಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ