High School Teachers Recruitment: 2500 ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ: ಶೀಘ್ರದಲ್ಲೇ ಅಧಿಸೂಚನೆ ಪ್ರಕಟ

ಒಟ್ಟು 2500 ಸಹ ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ರಾಜ್ಯದಲ್ಲಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ (Department of Public Education)  ಒಟ್ಟು 2500 ಸಹ ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಸಾರ್ವಜನಿಕ ಶಿಕ್ಷಣ ಇಲಾಖೆ
    ಹುದ್ದೆಯ ಹೆಸರು: ಫ್ರೌಢಶಾಲಾ ಶಿಕ್ಷಕರು
    ಹುದ್ದೆಗಳ ಸಂಖ್ಯೆ: 2500
    ಉದ್ಯೋಗ ಸ್ಥಳ: ಕರ್ನಾಟಕ
    ಸಂಬಳ: ಫ್ರೌಡಶಾಲಾ ಶಿಕ್ಷಕರ ನೇಮಕಾತಿ



















    ಹುದ್ದೆಹುದ್ದೆ ಸಂಖ್ಯೆ
    ಸರ್ಕಾರಿ ಪ್ರೌಢಶಾಲೆಗಳ ಸಹ ಶಿಕ್ಷಕರು2,200
    ಸರ್ಕಾರಿ ಪ್ರೌಢಶಾಲೆಗಳ ದೈಹಿಕ ಶಿಕ್ಷಕರು200
    ಸರ್ಕಾರಿ ಪ್ರೌಢಶಾಲೆಗಳ ವಿಶೇಷ ಶಿಕ್ಷಕರು100

    ಶೈಕ್ಷಣಿಕ ಅರ್ಹತೆ: ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮತ್ತು ಮಂಡಳಿಯಿಂದ ಪದವಿ ಮತ್ತು ಬಿಇಎಡ್​ ಮತ್ತು ಬಿಪಿಎಡ್​ ಶಿಕ್ಷಣ ಪಡೆದಿರಬೇಕು.

    ವಯೋಮಿತಿ: ಸಾರ್ವಜನಿಕ ಶಿಕ್ಷಣ ಇಲಾಖೆ ಅನುಸಾರ ವಯೋಮಿತಿ ಹೊಂದಿರಬೇಕು.

    ಇದನ್ನು ಓದಿ: ಕೇಂದ್ರ ಲೋಕ ಸೇವಾ ಆಯೋಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ ವಿಧಾನ: ಆನ್​ಲೈನ್​

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಅರ್ಜಿ ಶುಲ್ಕ: ಸಾರ್ವಜನಿಕ ಶಿಕ್ಷಣ ಇಲಾಖೆ ನಿಯಮ ಅನುಸಾರ

    ಇದನ್ನು ಓದಿ: 778 ಪಿಯು ಉಪನ್ಯಾಸಕರ ನೇಮಕಾತಿ; ಶೀಘ್ರದಲ್ಲೇ ಹೊರಬೀಳಲಿದೆ ಅಧಿಸೂಚನೆ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ

    ಪ್ರಮುಖ ಲಿಂಕ್​ಗಳು

    ಅಧಿಕೃತ ವೆಬ್‌ಸೈಟ್: schooleducation.kar.nic.in

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: