DGCA: ಮಾಸಿಕ ವೇತನ ₹ 75,000; ನಾಗರಿಕ ವಿಮಾನಯಾನ ನಿರ್ದೇಶನಾಲಯದಲ್ಲಿ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡಿಸೆಂಬರ್ 13ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್​(Offline) ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

DGCA

DGCA

  • Share this:
DGCA Recruitment 2021: ನಾಗರಿಕ ವಿಮಾನಯಾನ ನಿರ್ದೇಶನಾಲಯ (Directorate General of Civil Aviation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 20 ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್, ಬಿಎಸ್ಸಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 13ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್​(Offline) ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ DGCA ಅಧಿಕೃತ ವೆಬ್​ಸೈಟ್​ dgca.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆನಾಗರಿಕ ವಿಮಾನಯಾನ ನಿರ್ದೇಶನಾಲಯ
ಹುದ್ದೆಯ ಹೆಸರುಕನ್ಸಲ್ಟೆಂಟ್
ಒಟ್ಟು ಹುದ್ದೆಗಳು20
ವಿದ್ಯಾರ್ಹತೆಬಿಇ, ಬಿ.ಟೆಕ್​, ಬಿಎಸ್ಸಿ
ಉದ್ಯೋಗದ ಸ್ಥಳನವದೆಹಲಿ
ವೇತನಮಾಸಿಕ ₹ 75,000
ಅರ್ಜಿ ಸಲ್ಲಿಕೆ ವಿಧಾನಆಫ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ13/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ27/12/2021



ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/12/2021

ವಿದ್ಯಾರ್ಹತೆ:
ನಾಗರಿಕ ವಿಮಾನಯಾನ ನಿರ್ದೇಶನಾಲಯ ನೇಮಕಾತಿಯ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್/ ಬಿಎಸ್ಸಿ ಪೂರ್ಣಗೊಳಿಸಿರಬೇಕು.



ಇದನ್ನೂ ಓದಿ: ಗ್ರೇಡ್​-7 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ ₹ 1,45,000, BE, B Tech ಆದವರಿಗೆ ಅವಕಾಶ



ಅನುಭವ:
ನಾಗರಿಕ ವಿಮಾನಯಾನ ನಿರ್ದೇಶನಾಲಯದಿಂದ ಅನುಮತಿ ಪಡೆದ ಏರ್​ಕ್ರಾಫ್ಟ್​​ ಮೇಂಟೇನೆನ್ಸ್​ ಸಂಸ್ಥೆಯಲ್ಲಿ ಕನಿಷ್ಠ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ವಯೋಮಿತಿ:
ನಾಗರಿಕ ವಿಮಾನಯಾನ ನಿರ್ದೇಶನಾಲಯ ನೇಮಕಾತಿಯ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 63 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:
ನಾಗರಿಕ ವಿಮಾನಯಾನ ನಿರ್ದೇಶನಾಲಯ ನೇಮಕಾತಿಯ ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್​ ನೀಡಲಾಗುತ್ತದೆ.

ವೇತನ:
ನಾಗರಿಕ ವಿಮಾನಯಾನ ನಿರ್ದೇಶನಾಲಯ ನೇಮಕಾತಿಯ ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 75,000 ವೇತನ ನೀಡಲಾಗುತ್ತದೆ.

ಇದನ್ನೂ ಓದಿ: BECIL Recruitment 2021: ತಿಂಗಳಿಗೆ ₹ 21,970 ಸಂಬಳ; ಮೆಡಿಕಲ್​ ಲ್ಯಾಬ್​ ಟೆಕ್ನಾಲಜಿಸ್ಟ್​ ಹುದ್ದೆಗಳು ಖಾಲಿ

ಆಯ್ಕೆ ಪ್ರಕ್ರಿಯೆ:
ಶಾರ್ಟ್​​ ಲಿಸ್ಟಿಂಗ್
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ನೇಮಕಾತಿ ವಿಭಾಗ
ನಾಗರಿಕ ವಿಮಾನಯಾನ ನಿರ್ದೇಶನಾಲಯ
Published by:Latha CG
First published: