Job Alert: ಯಾವುದೇ ವಿಷಯದಲ್ಲಿ ಡಿಗ್ರಿ ಆದವರಿಗೆ ಚಿಕ್ಕಮಗಳೂರಿನಲ್ಲಿದೆ ಕೆಲಸ; ತಿಂಗಳಿಗೆ 35,000 ರೂ ವೇತನ

ಈ ಮೇಲ್ಕಂಡ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಈ ಹುದ್ದೆಯೂ ಸಂಪೂರ್ಣವಾಗಿ ತಾತ್ಕಲಿಕವಾಗಿದ್ದು, ಒಂದು ವರ್ಷದ ಅವಧಿಗೆ ಈ ಹುದ್ದೆಗಳ ನೇಮಕಾತಿ ನಡೆಯಲಿದೆ.

 ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಚಿಕ್ಕಮಗಳೂರು ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ (Rural Drinking Water and Sanitation Department Chikkamagaluru) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಯೋಜನಾ ವ್ಯವಸ್ಥಾಪಕರ (District Project Manager) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 21 ಆಗಿದೆ.

    ಈ ಮೇಲ್ಕಂಡ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಈ ಹುದ್ದೆಯೂ ಸಂಪೂರ್ಣವಾಗಿ ತಾತ್ಕಲಿಕವಾಗಿದ್ದು, ಒಂದು ವರ್ಷದ ಅವಧಿಗೆ ಈ ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕಮಗಳೂರು
    ಹುದ್ದೆಜಿಲ್ಲಾ ಯೋಜನಾ ವ್ಯವಸ್ಥಾಪಕರು (DPM)
    ಹುದ್ದೆಗಳ ಸಂಖ್ಯೆ1
    ಕಾರ್ಯ ನಿರ್ವಹಣೆ ಸ್ಥಳಚಿಕ್ಕಮಗಳೂರು
    ವೇತನ35000 ರೂ. ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮ್ಯಾನೇಜ್‌ಮೆಂಟ್/ಸಮಾಜ ವಿಜ್ಞಾನ/ಸಾಮಾಜಿಕ ಕೆಲಸದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.

    ಅನುಭವ: ನೈರ್ಮಲ್ಯ ಮತ್ತು ಗ್ರಾಮೀಣಾಭಿವೃದ್ಧಿ ತಂಡದಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಇರಬೇಕು.
    ಜಲಜೀವನ್​ ಮಿಷನ್​ ಯೋಜನೆಯಡಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದವರಿಗೆ ಆದ್ಯತೆ.

    ಇದನ್ನು ಓದಿ: ಬಿಎ, ಬಿಕಾಂ ಆದವರಿಗೆ ಕರ್ನಾಟಕ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​ನಲ್ಲಿದೆ ಕೆಲಸ; ಬೇಗ ಅರ್ಜಿ ಸಲ್ಲಿಸಿ

    ವಯೋಮಿತಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕಮಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 45 ವರ್ಷಗಳು.

    ವಯೋಮಿತಿ ಸಡಿಲಿಕೆ:
    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕಮಗಳೂರು ನಿಯಮಾವಳಿ ಪ್ರಕಾರ

    ಅರ್ಜಿ ಸಲ್ಲಿಕೆ : ಆನ್​ಲೈನ್​

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕಕ್ಕೆ ವಿನಾಯಿತಿ ನೀಡಲಾಗಿದೆ.

    ಆಯ್ಕೆ ವಿಧಾನ
    ಮೆರಿಟ್​ ಮತ್ತು ಅನುಭವದ ಆಧಾರದ ಮೇಲೆ

    ಇದನ್ನು ಓದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ

    ವಿಶೇಷ ಸೂಚನೆ
    ಹುದ್ದೆ ಕುರಿತ ಹೆಚ್ಚಿನ ಮಾಹಿತಿಗೆ : ಕಾರ್ಯಪಾಲಕ ಇಂಜಿನಿಯರ್​​, ಗ್ರಾಮೀಣ ಕುಡಿಯುವ ನೀರು ವಿಭಾಗ, ಚಿಕ್ಕಮಗಳೂರು. ದೂರವಾಣಿ ಸಂಖ್ಯೆ: 08262-295795 ಅಥವಾ ಇಮೇಲ್​ ವಿಳಾಸ: eerwsckm@gmail.com ಕ್ಕೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

    ಆನ್‌ಲೈನ್ ಅರ್ಜಿಗಳನ್ನು ಬೆಳಿಗ್ಗೆ 10:00 ರಿಂದ ಸಂಜೆ 5:30 ರವರೆಗೆ ಸರ್ಕಾರಿ ಕೆಲಸದ ಸಮಯದಲ್ಲಿ ಮಾತ್ರ ಸಲ್ಲಿಸಲು ಅವಕಾಶ ಇದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14 ಜುಲೈ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21 ಜುಲೈ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: chikkamagaluru.nic.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ: 

    ನೇಮಕಾತಿ ಅಧಿಸೂಚನೆ  ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    -ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

    -ಮೇಲಿನ ಲಿಂಕ್‌ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ. ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: