DRDO DESIDOC Recruitment 2021: ಡಿಆರ್ಡಿಒ ಡಿಫೆನ್ಸ್ ಸೈಂಟಿಫಿಕ್ ಇನ್ಫರ್ಮೇಶನ್ & ಡಾಕ್ಯುಮೆಂಟೇಶನ್(DRDO Defence Scientific Information and Documentation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 21 ಲೈಬ್ರರಿ & ಇನ್ಫರ್ಮೇಶನ್ ಸೈನ್ಸ್(Library and Information Science), ಕಂಪ್ಯೂಟರ್ ಸೈನ್ಸ್(Computer Science) ಹುದ್ದೆಗಳು ಖಾಲಿ ಇದ್ದು, ಬಿಇ(B.E), ಬಿ.ಟೆಕ್(B.Tech), ಡಿಪ್ಲೋಮಾ(Diploma) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ನವೆಂಬರ್ 13ರ ವರೆಗೆ ಅರ್ಜಿ ಹಾಕಬಹುದು. ಅಕ್ಟೋಬರ್ 23ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು DRDO DESIDOCನ ಅಧಿಕೃತ ವೆಬ್ಸೈಟ್ www.drdo.gov.in ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಡಿಆರ್ಡಿಒ ಡಿಫೆನ್ಸ್ ಸೈಂಟಿಫಿಕ್ ಇನ್ಫರ್ಮೇಶನ್ & ಡಾಕ್ಯುಮೆಂಟೇಶನ್ (DRDO DESIDOC) |
ಹುದ್ದೆಯ ಹೆಸರು |
ಲೈಬ್ರರಿ & ಇನ್ಫರ್ಮೇಶನ್ ಸೈನ್ಸ್, ಕಂಪ್ಯೂಟರ್ ಸೈನ್ಸ್ |
ಒಟ್ಟು ಹುದ್ದೆಗಳು |
21 |
ವಿದ್ಯಾರ್ಹತೆ |
ಬಿ.ಇ, ಬಿ.ಟೆಕ್, ಡಿಪ್ಲೋಮಾ |
ಕೆಲಸದ ಸ್ಥಳ |
ಹೈದರಾಬಾದ್ |
ಸಂಬಳ |
ಮಾಸಿಕ ₹8000-9000 |
ಅರ್ಜಿ ಸಲ್ಲಿಸುವ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
23/10/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
13/11/2021 |
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13/11/2021
ಇದನ್ನೂ ಓದಿ:Indian Army Recruitment 2021: ಭಾರತೀಯ ಸೇನೆಯಲ್ಲಿ 191 ಹುದ್ದೆಗಳು ಖಾಲಿ; BE, B. Tech ಪದವೀಧರರು ಅರ್ಜಿ ಸಲ್ಲಿಸಿ
ಹುದ್ದೆಯ ಮಾಹಿತಿ:
ಲೈಬ್ರಿ & ಇನ್ಫರ್ಮೇಶನ್ ಸೈನ್ಸ್- 12 ಹುದ್ದೆಗಳು
ಕಂಪ್ಯೂಟರ್ ಸೈನ್ಸ್-09 ಹುದ್ದೆಗಳು
ವಿದ್ಯಾರ್ಹತೆ:
ಲೈಬ್ರರಿ & ಇನ್ಫರ್ಮೇಶನ್ ಸೈನ್ಸ್
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಲೈಬ್ರರಿ & ಇನ್ಫರ್ಮೇಶನ್ ಸೈನ್ಸ್ನಲ್ಲಿ ಪದವಿ ಪಡೆದಿರಬೇಕು.
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಲೈಬ್ರರಿ ಸೈನ್ಸ್ನಲ್ಲಿ 2 ವರ್ಷಗಳ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
ಕಂಪ್ಯೂಟರ್ ಸೈನ್ಸ್
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ನಲ್ಲಿ (B.E / B. Tech) ಪದವಿ ಪಡೆದಿರಬೇಕು.
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ನಲ್ಲಿ 3 ವರ್ಷಗಳ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
ಕೆಲಸದ ಸ್ಥಳ:
ಹೈದ್ರಾಬಾದ್(ತೆಲಂಗಾಣ)
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ ₹ 8,000- ಗರಿಷ್ಠ ₹9,000 ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಇದನ್ನೂ ಓದಿ:India Post GDS Recruitment 2021: 10ನೇ ತರಗತಿ ಪಾಸಾದವರಿಗೆ ಅಂಚೆ ಕಚೇರಿಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಸಲು ಹೀಗೆ ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ DRDO ಅಧಿಕೃತ ವೆಬ್ಸೈಟ್ www.drdo.gov.inಗೆ ಭೇಟಿ ನೀಡಿ.
- ಅಲ್ಲಿ ಕಾಣಸಿಗುವ “Recruitment/ Career/ Advertisement menu” ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಖಾಲಿ ಇರುವ ಹುದ್ದೆಗಳ ನೋಟಿಫಿಕೇಶನ್ಗಾಗಿ ಸರ್ಚ್ ಮಾಡಿ, ಅದರ ಮೇಲೆ ಕ್ಲಿಕ್ ಮಾಡಿ.
- ಅಧಿಕೃತ ನೋಟಿಫಿಕೇಶನ್ನ ಲಿಂಕ್ನ್ನು ಡೌನ್ಲೋಡ್ ಮಾಡಿಕೊಳ್ಳಿ.
- ನೋಟಿಫಿಕೇಶನ್ನಲ್ಲಿ ನೀಡಲಾಗಿರುವ ಎಲ್ಲಾ ಸೂಚನೆಗಳನ್ನು ಸರಿಯಾಗಿ ಓದಿ.
- ಕೆಳಗೆ ನೀಡಲಾಗಿರುವ Official Online Apply/ Registration ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ
- ಕೇಳಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ಸರಿಯಾದ ಫಾರ್ಮ್ಯಾಟ್ ಹಾಗೂ ಸೈಜಿನಲ್ಲಿ ಅಪ್ಲೋಡ್ ಮಾಡಿ.
- ಕೊನೆಯಲ್ಲಿ ಎಲ್ಲಾ ಮಾಹಿತಿ ಸರಿಯಾಗಿದೆಯೇ ಎಂದು ಪರಿಶೀಲಿಸಿ, ಸಬ್ಮಿಟ್ ಕೊಡಿ.
- ಬಳಿಕ ಸಂಸ್ಥೆ ಅರ್ಜಿ ಶುಲ್ಕ ಕೇಳಿದ್ದರೆ, ಪಾವತಿಸಿ.
- ಕೊನೆಯಲ್ಲಿ ಅರ್ಜಿಯನ್ನು ಸಬ್ಮಿಟ್ ಮಾಡಿ, ಒಂದು ಪ್ರತಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ