• Home
  • »
  • News
  • »
  • jobs
  • »
  • DRDOದಲ್ಲಿ 3 ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ 39 ಸಾವಿರ ಸಂಬಳ

DRDOದಲ್ಲಿ 3 ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ 39 ಸಾವಿರ ಸಂಬಳ

DRDO

DRDO

ಡಿಆರ್​ಡಿಒ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್, ಎಂಇ/ ಎಂ.ಟೆಕ್ ಪೂರ್ಣಗೊಳಿಸಿರಬೇಕು.

  • Share this:

    DRDO Recruitment 2022: ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ(Defence Research and Development Organization)ಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಜೂನಿಯರ್ ರಿಸರ್ಚ್​ ಫೆಲೋ(Junior Research Fellow) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಡಿಸೆಂಬರ್ 31, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿ(Bengaluru)ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ
    ಹುದ್ದೆಜೂನಿಯರ್ ರಿಸರ್ಚ್​ ಫೆಲೋ
    ಒಟ್ಟು ಹುದ್ದೆ3
    ವಿದ್ಯಾರ್ಹತೆಬಿಇ/ ಬಿ.ಟೆಕ್, ಎಂಇ/ ಎಂ.ಟೆಕ್
    ವೇತನಮಾಸಿಕ ₹ 39370
    ಉದ್ಯೋಗದ ಸ್ಥಳಬೆಂಗಳೂರು


    ಅರ್ಹತಾ ಮಾನದಂಡಗಳೇನು?


    ಶೈಕ್ಷಣಿಕ ಅರ್ಹತೆ:
    ಡಿಆರ್​ಡಿಒ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್, ಎಂಇ/ ಎಂ.ಟೆಕ್ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: BSF Recruitment 2022: ಹೆಡ್​ ಕಾನ್ಸ್​​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ ₹ 81,000


    ವಯೋಮಿತಿ:
    ಡಿಆರ್​ಡಿಒ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು- 3 ವರ್ಷ
    ಎಸ್​​ಸಿ/ಎಸ್​ಟಿ ಅಭ್ಯರ್ಥಿಗಳು- 5 ವರ್ಷ


    ಆಯ್ಕೆ ಪ್ರಕ್ರಿಯೆ:
    ಗೇಟ್​ ಸ್ಕೋರ್
    ಮೆರಿಟ್ ಲಿಸ್ಟ್​
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?


    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಡಿಸೆಂಬರ್ 31ರೊಳಗೆ ಕಳುಹಿಸಬೇಕು.


    ನಿರ್ದೇಶಕರು
    ಡಿಆರ್​ಡಿಒ ಯಂಗ್ ಸೈಂಟಿಸ್ಟ್​ ಲ್ಯಾಬ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​
    ಡಾ. ರಾಜ ರಾಮಣ್ಣ ಕಾಂಪ್ಲೆಕ್ಸ್​
    ರಾಜ್​ ಭವನ್ ಸರ್ಕಲ್
    ಹೈ ಗ್ರೌಂಡ್ಸ್​, ಬೆಂಗಳೂರು- 560001


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 31/ 12/2022


    ಇದನ್ನೂ ಓದಿ: Job Alert: ಬೆಳಗಾವಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಉದ್ಯೋಗ, 10ನೇ ತರಗತಿ ಪಾಸಾಗಿದ್ರೆ ಸಾಕು


    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-2201 7711 ಗೆ ಕರೆ ಮಾಡಬಹುದು.

    Published by:Latha CG
    First published: