DRDO Recruitment: ಡಿಆರ್​ಡಿಒದಲ್ಲಿ 1901 ಹುದ್ದೆ ನೇಮಕಾತಿ; ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ

ಸಂಸ್ಥೆಯಲ್ಲಿ ಹಿರಿಯ ತಾಂತ್ರಿಕ ಸಹಾಯಕ-ಬಿ (STA-B) ಮತ್ತು ಟೆಕ್ನಿಷಿಯನ್-ಎ (Tech-A) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್‌ಮೆಂಟ್ (CEPTAM 10)ಅಡಿಯಲ್ಲಿ 1901 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಿರಿಯ ತಾಂತ್ರಿಕ ಅಧಿಕಾರಿ -ಬಿ ಮತ್ತು ತಾಂತ್ರಿಕ ಅಧಿಕಾರಿ- ಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 23 ಆಗಿದೆ


ಸಂಸ್ಥೆಯಲ್ಲಿ ಹಿರಿಯ ತಾಂತ್ರಿಕ ಸಹಾಯಕ-ಬಿ (STA-B) ಮತ್ತು ಟೆಕ್ನಿಷಿಯನ್-ಎ (Tech-A) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಐಟಿಐ ಡಿಪ್ಲೊಮಾ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ. ಸಂಸ್ಥೆ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ
ಹುದ್ದೆಯ ಹೆಸರು: ತಾಂತ್ರಿಕ ಸಹಾಯಕ-ಬಿ ಮತ್ತು ಟೆಕ್ನಿಷಿಯನ್​-2
ಒಟ್ಟು ಹುದ್ದೆ ಸಂಖ್ಯೆ: 1901
ಕಾರ್ಯ ನಿರ್ವಹಣೆ ಸ್ಥಳ: ಅಖಿಲ ಭಾರತ
ವೇತನ: 19900-63200 ರೂ ಮಾಸಿಕ
ಹುದ್ದೆಹುದ್ದೆ ಸಂಖ್ಯೆವೇತನ
ಹಿರಿಯ ತಾಂತ್ರಿಕ ಸಹಾಯಕ107535400-112400 ರೂ ಮಾಸಿಕ
ಟೆಕ್ನಿಷಿಯನ್​-282619900-63200 ರೂ ಮಾಸಿಕ


ಶೈಕ್ಷಣಿಕ ಅರ್ಹತೆ:
ಹಿರಿಯ ತಾಂತ್ರಿಕ ಸಹಾಯಕ: ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ವಿಜ್ಞಾನದಲ್ಲಿ ಪದವಿ ಅಥವಾ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ ಅಥವಾ ಕಂಪ್ಯೂಟರ್ ವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಪದವಿ ಅಥವಾ ಡಿಪ್ಲೊಮಾವನ್ನು ಹೊಂದಿರಬೇಕು.


ಇದನ್ನು ಓದಿ: 871ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಒಎನ್​ಜಿಸಿ; ಬಿಇ ಆದವರಿಗೆ ಅವಕಾಶ


ಟೆಕ್ನಿಷಿಯನ್​-2 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಮಾನ್ಯತೆ ಪಡೆದ ಕೈಗಾರಿಕಾ ತರಬೇತಿ ಸಂಸ್ಥೆ ಐಟಿಐ ಯಿಂದ ಪ್ರಮಾಣಪತ್ರವನ್ನು ಪಡೆದಿರಬೇಕು.


ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು ಕನಿಷ್ಟ 18 ವರ್ಷ ಮತ್ತು ಗರಿಷ್ಠ 28 ವರ್ಷಗಳು ಮೀರಿರಬಾರದು.


ಅರ್ಜಿ ಶುಲ್ಕ:
ಪ.ಜಾ, ಪ. ಪಂ, ಮಹಿಳೆ, ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಎಲ್ಲಾ ಇತರ ಅಭ್ಯರ್ಥಿಗಳು: 100 ರೂ.


ಪಾವತಿ ವಿಧಾನ: ಆನ್‌ಲೈನ್


ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ, ವ್ಯಾಪಾರ ಪರೀಕ್ಷೆ ಮತ್ತು ಸಂದರ್ಶನ


ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03 ಸೆಪ್ಟೆಂಬರ್​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23 ಸೆಪ್ಟೆಂಬರ್​ 2022


ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: drdo.gov.in


ಇದನ್ನು ಓದಿ: ದಾವಣಗೆರೆ ವಿವಿಯಲ್ಲಿ ಎಫ್​ಡಿಎ ಸೇರಿ ಹಲವು ಹುದ್ದೆ ನೇಮಕಾತಿ


ಅರ್ಜಿ ಸಲ್ಲಿಕೆ ಪ್ರಕ್ರಿಯೆ:


ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


-ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.


-ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಲೋಡ್​ ಮಾಡಿ


-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ವಿಳಾಸಕ್ಕೆ ನಿಗದಿತ ದಿನಾಂಕಕ್ಕೂ ಮುನ್ನ ಸಲ್ಲಿಸಿ.

Published by:Seema R
First published: