Eastern Railway Recruitment 2021: ಪೂರ್ವ ರೈಲ್ವೆಯಲ್ಲಿ ವಿವಿಧ ಹುದ್ದೆಗಳು ಖಾಲಿ, PUC, ITI ಪಾಸಾದವರು ಅರ್ಜಿ ಸಲ್ಲಿಸಿ

ಕ್ರೀಡಾ ಸಾಧನೆಗಳ ಮೌಲ್ಯಮಾಪನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಜೊತೆಗೆ ಶೈಕ್ಷಣಿಕ ಅರ್ಹತೆಯನ್ನು ಆಧರಿಸಿರುತ್ತದೆ. ಪ್ರಾಯೋಗಿಕ ಪರೀಕ್ಷೆಯು ಜನವರಿ/ ಫೆಬ್ರವರಿ 2022 ರಲ್ಲಿ ಇರುತ್ತದೆ.

ಭಾರತೀಯ ರೈಲ್ವೆ

ಭಾರತೀಯ ರೈಲ್ವೆ

  • Share this:
Eastern Railway Recruitment 2021: ಪೂರ್ವ ರೈಲ್ವೆ(Eastern Railway)ಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 21 ಸ್ಪೋರ್ಟ್ಸ್​ ಕೋಟಾ(Sports Quota) ಹುದ್ದೆಗಳು ಖಾಲಿ ಇದ್ದು, 12ನೇ ತರಗತಿ(12th), ಐಟಿಐ(ITI), ಪದವಿ(Bachelor Degree) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 24ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪೂರ್ವ ರೈಲ್ವೆಯ ಅಧಿಕೃತ ವೆಬ್​ಸೈಟ್​ er.indianrailways.gov.in ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆಪೂರ್ವ ರೈಲ್ವೆ
ಹುದ್ದೆಯ ಹೆಸರುಸ್ಪೋರ್ಟ್ಸ್​ ಕೋಟಾ
ಒಟ್ಟು ಹುದ್ದೆಗಳು21
 ವಿದ್ಯಾರ್ಹತೆ12ನೇ ತರಗತಿ, ಐಟಿಐ, ಪದವಿ
ಉದ್ಯೋಗದ ಸ್ಥಳಭಾರತದ ಯಾವುದೇ ಸ್ಥಳ
ವೇತನನಿಯಮಾನುಸಾರ
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ24/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ11/12/2021



ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 24/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11/12/2021

ಇದನ್ನೂ ಓದಿ: HAL Recruitment 2021: ತಿಂಗಳಿಗೆ ₹ 21,000 ಸಂಬಳ, ಡಿಪ್ಲೊಮಾ ಆದವರಿಗೆ ಬೆಂಗಳೂರಿನ HALನಲ್ಲಿ ಉದ್ಯೋಗ

ಅರ್ಜಿ ಶುಲ್ಕ:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ.
SC/ST/ ಮಹಿಳಾ/ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕ.

ಹುದ್ದೆಯ ಮಾಹಿತಿ:

ವಾಟರ್ ಪೋಲೋ (ಪುರುಷ)
ಬಾಸ್ಕೆಟ್ ಬಾಲ್ (ಪುರುಷ)
ಕಬಡ್ಡಿ(ಪುರುಷ, ಮಹಿಳೆ)
ಸ್ವಿಮ್ಮಿಂಗ್ (ಪುರುಷ)
ಆರ್ಚರಿ (ಪುರುಷ, ಮಹಿಳೆ)
ಅಥ್ಲೆಟಿಕ್ಸ್​ (ಮಹಿಳಾ)
ಬ್ಯಾಡ್ಮಿಂಟನ್ (ಪುರುಷ)
ಬ್ರಿಡ್ಜ್​ (ಪುರುಷ)
ಕ್ರಿಕೆಟ್ (ಮಹಿಳಾ)
ಜಿಮ್ನಾಸ್ಟಿಕ್ಸ್​​(ಪುರುಷ)
ಶೂಟಿಂಗ್(ಪುರುಷ)

ವಿದ್ಯಾರ್ಹತೆ:

ಸ್ಪೋರ್ಟ್ಸ್​ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಅಥವಾ 12ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:

ಸ್ಪೋರ್ಟ್ಸ್​ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-25 ವರ್ಷದೊಳಗಿರಬೇಕು.

ಉದ್ಯೋಗದ ಸ್ಥಳ:

ಸ್ಪೋರ್ಟ್ಸ್​ ಕೋಟಾ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ.

ವೇತನ:

ಸ್ಪೋರ್ಟ್ಸ್​ ಕೋಟಾ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಇದನ್ನೂ ಓದಿ: Forest Department Recruitment 2021: ಸ್ನಾತಕೋತ್ತರ ಪದವೀಧರರಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ

ಆಯ್ಕೆ ಪ್ರಕ್ರಿಯೆ:

ಕ್ರೀಡಾ ಸಾಧನೆಗಳ ಮೌಲ್ಯಮಾಪನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಜೊತೆಗೆ ಶೈಕ್ಷಣಿಕ ಅರ್ಹತೆಯನ್ನು ಆಧರಿಸಿರುತ್ತದೆ. ಪ್ರಾಯೋಗಿಕ ಪರೀಕ್ಷೆಯು ಜನವರಿ/ ಫೆಬ್ರವರಿ 2022 ರಲ್ಲಿ ಇರುತ್ತದೆ.



ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
Published by:Latha CG
First published: