ECIL Recruitment 2021: ತಿಂಗಳಿಗೆ ₹ 23,000 ಸಂಬಳ, ಎಲೆಕ್ಟ್ರಾನಿಕ್ಸ್​ ಕಾರ್ಪೊರೇಷನ್​ ಆಫ್​ ಇಂಡಿಯಾದಲ್ಲಿ BE, B Tech ಅಭ್ಯರ್ಥಿಗಳಿಗೆ ಉದ್ಯೋಗ

ECIL Recruitment 2021: ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಎಂಜಿನಿಯರಿಂಗ್ ಪದವಿ ಪಡೆದಿರಬೇಕು.

ECIL

ECIL

  • Share this:
ಎಲೆಕ್ಟ್ರಾನಿಕ್ಸ್​ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(Electronics Corporation of India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಟೆಕ್ನಿಕಲ್ ಆಫೀಸರ್(Technical Officer) ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್​ ಪೂರ್ಣಗೊಳಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 19 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆನ್​ಲೈನ್​(Online) ಮೂಲಕ ಮಾತ್ರವೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ನವೆಂಬರ್ 26 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಉದ್ಯೋಗಾಂಕ್ಷಿಗಳು ಹೆಚ್ಚಿನ ಮಾಹಿತಿಗಾಗಿ ಎಲೆಕ್ಟ್ರಾನಿಕ್ಸ್​ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್​​ನ ಅಧಿಕೃತ ವೆಬ್​ಸೈಟ್​ www.ecil.co.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಎಲೆಕ್ಟ್ರಾನಿಕ್ಸ್​ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ಹುದ್ದೆಯ ಹೆಸರುಟೆಕ್ನಿಕಲ್ ಆಫೀಸರ್
ಒಟ್ಟು ಹುದ್ದೆಗಳು9
ವಿದ್ಯಾರ್ಹತೆಬಿಇ/ ಬಿ.ಟೆಕ್
ವೇತನಮಾಸಿಕ ₹ 23,000
ಉದ್ಯೋಗದ ಸ್ಥಳಹೈದ್ರಾಬಾದ್
ಅರ್ಜಿ ಸಲ್ಲಿಸುವ ಬಗೆಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ19/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ26/11/2021ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/11/2021

ಇದನ್ನೂ ಓದಿ: BMTC Recruitment 2021: SSLC ಪಾಸಾದವರಿಗೆ BMTCಯಲ್ಲಿ ಬಂಪರ್ ಉದ್ಯೋಗ; ಈಗಲೇ ಅರ್ಜಿ ಸಲ್ಲಿಸಿ

ಹುದ್ದೆಯ ಮಾಹಿತಿ:

ಟೆಕ್ನಿಕಲ್ ಆಫೀಸರ್(ಕ್ಯಾಟಗರಿ-1): 08
ಟೆಕ್ನಿಕಲ್ ಆಫೀಸರ್ (ಕ್ಯಾಟಗರಿ-2): 01
ಒಟ್ಟು -09 ಹುದ್ದೆಗಳು

ವಿದ್ಯಾರ್ಹತೆ:

ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಎಂಜಿನಿಯರಿಂಗ್ ಪದವಿ ಪಡೆದಿರಬೇಕು.

ವಯೋಮಿತಿ:

ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 30 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:

ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತೆಲಂಗಾಣದ ಹೈದಾರಾಬಾದ್​ನಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:

ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 23,000 ವೇತನ ನೀಡಲಾಗುತ್ತದೆ.

ಇದನ್ನೂ ಓದಿ: Central Bank of India Recruitment 2021: ತಿಂಗಳಿಗೆ 1 ಲಕ್ಷ ಸಂಬಳ, ಸೆಂಟ್ರಲ್ ಬ್ಯಾಂಕ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳು ಖಾಲಿ

ಆಯ್ಕೆ ಪ್ರಕ್ರಿಯೆ:

ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
Published by:Latha CG
First published: