ECIL Recruitment 2022: ಇಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (The Electronics Corporation of India Limited) 1625 ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಆದೇಶ ನೀಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಏಪ್ರಿಲ್ 30ರ ಒಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಲ್ಲದೇ, ಉದ್ಯೋಗಾಕಾಂಕ್ಷಿಗಳು ಅಧಿಕೃತ ವೆಬ್ಸೈಟ್ www.ecil.co.in ಗೆ ಭೇಟಿ ನೀಡಿ ಅರ್ಜಿ ಹಾಕಬಹುದು ಅಥವಾ ನಾವು ಒದಗಿಸಿರುವ ನೇರ ಲಿಂಕ್ ಮೂಲಕ ಅರ್ಜಿ ಹಾಕಬಹುದು. ಈ ಹುದ್ದೆಗೆ ಸಂಬಂಧಪಟ್ಟ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ಇಲ್ಲಿದೆ.
ಸಂಸ್ಥೆ |
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ |
ಹುದ್ದೆ |
ಜೂನಿಯರ್ ಟೆಕ್ನಿಷಿಯನ್ |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ |
01.04.2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
30.04.2022 |
ಒಟ್ಟು ಹುದ್ದೆಗಳು |
1625 |
ಶೈಕ್ಷಣಿಕ ಅರ್ಹತೆ |
ಐಟಿಐ |
ವಯೋಮಿತಿ |
ಗರಿಷ್ಠ 30 ವರ್ಷ |
ವೇತನ |
ರೂ.20,480 |
ಅರ್ಜಿ ಹಾಕಿ |
ಅಪ್ಲೈ ಮಾಡಿ |
ಹೆಚ್ಚಿನ ಮಾಹಿತಿಗೆ |
ಇಲ್ಲಿ ಕ್ಲಿಕ್ ಮಾಡಿ |
ಖಾಲಿ ಇರುವ 1625 ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅರ್ಜಿ ಆಹ್ವಾನಿಸಿದ್ದು, ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 30 ವರ್ಷದ ಒಳಗಿನ ಅಭ್ಯರ್ಥಿಗಳು ಏಪ್ರಿಲ್ 30ರ ಒಳಗೆ ಅರ್ಜಿ ಸಲ್ಲಿಸಬೇಕಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.20,480ವೇತನ ನೀಡಲಾಗುತ್ತದೆ.
ಸಂಸ್ಥೆ: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL)
ಹುದ್ದೆ: ಜೂನಿಯರ್ ಟೆಕ್ನಿಷಿಯನ್
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01.04.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.04.2022
ಒಟ್ಟು ಹುದ್ದೆಗಳು: 1625
ಇದನ್ನೂ ಓದಿ: ಮ್ಯಾನೇಜರ್ ಸೇರಿ 80 ಹುದ್ದೆಗೆ ಅರ್ಜಿ ಆಹ್ವಾನ - ಮೇ 2 ಕೊನೆಯ ದಿನ
ಶೈಕ್ಷಣಿಕ ಅರ್ಹತೆ
ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಐಟಿಐ ಉತ್ತೀರ್ಣರಾಗಿರಬೇಕು.
ವಯಸ್ಸಿನ ಮಿತಿ
ಗರಿಷ್ಠ ವಯಸ್ಸಿನ ಮಿತಿ 30 ವರ್ಷಗಳಾಗಿರಬೇಕು
ಉದ್ಯೋಗ ಸ್ಥಳ
ಭಾರತದಾದ್ಯಂತ
ಸಂಬಳದ ವಿವರಗಳು
ವೇತನ ಶ್ರೇಣಿ: ರೂ.20,480
ಅರ್ಜಿ ಸಲ್ಲಿಸುವ ಲಿಂಕ್
https://ecerp01.ecil.gov.in/ecilerec#
ವೆಬ್ಸೈಟ್: https://careers.ecil.co.in/advt1322.php
ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಆಯ್ಕೆ ಪ್ರಕ್ರಿಯೆ
ಡಾಕ್ಯುಮೆಂಟ್ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ