ECIL Recruitment 2022: ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್(Electronics Corporation of India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ಟೆಕ್ನಿಕಲ್ ಆಫೀಸರ್(Technical Officer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಡಿಸೆಂಬರ್ 14ರಂದು ಸಂದರ್ಶನ(Walk-in-Interview) ನಡೆಯಲಿದ್ದು, ಅಭ್ಯರ್ಥಿಗಳು ಪಾಲ್ಗೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ |
ಹುದ್ದೆ | ಟೆಕ್ನಿಕಲ್ ಆಫೀಸರ್ |
ಒಟ್ಟು ಹುದ್ದೆ | 22 |
ಉದ್ಯೋಗದ ಸ್ಥಳ | ಬೆಂಗಳೂರು |
ವೇತನ | ಮಾಸಿಕ ₹ 25,000-31,000 |
ಇದನ್ನೂ ಓದಿ: HMT Recruitment 2022: ಡಿಪ್ಲೋಮಾ ಆಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗ- ಈಗಲೇ ಅಪ್ಲೈ ಮಾಡಿ
ವಿದ್ಯಾರ್ಹತೆ:
ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ECE/EEE/E&I/CSE/ETC/ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 30, 2022ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಸಂದರ್ಶನ
ಇದನ್ನೂ ಓದಿ: ADA Recruitment 2022: ಎಂಜಿನಿಯರಿಂಗ್ ಆದವರಿಗೆ ಏರೋನಾಟಿಲ್ ಡೆವಲಪ್ಮೆಂಟ್ ಏಜೆನ್ಸಿಯಲ್ಲಿದೆ ಉದ್ಯೋಗಾವಕಾಶ
ಸಂದರ್ಶನ ನಡೆಯುವ ಸ್ಥಳ:
ಫ್ಯಾಕ್ಟರಿ ಮೇನ್ ಗೇಟ್
ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್
ECIL ಪೋಸ್ಟ್
ಹೈದರಾಬಾದ್-500062
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 07/12/2022
ಸಂದರ್ಶನ ನಡೆಯುವ ದಿನಾಂಕ: 14/12/2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ