• ಹೋಂ
 • »
 • ನ್ಯೂಸ್
 • »
 • Jobs
 • »
 • Karnataka 2nd PUC Exam: ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ- ಈ ಷರತ್ತು ಅನ್ವಯ

Karnataka 2nd PUC Exam: ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ- ಈ ಷರತ್ತು ಅನ್ವಯ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಪಿಯು ಬೋರ್ಡ್​ (PU Board) ಸಕಲ ಸಿದ್ಧತೆ ಮಾಡಿಕೊಂಡಿದೆ. ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಯಾವುದೇ ಊಹಾಪೋಹ, ವದಂತಿಗಳಿಗೆ ಕಿವಿಗೊಡದಂತೆ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ (Students) ಮತ್ತು ಪೋಷಕರಿಗೆ ಮನವಿ ಮಾಡಿದೆ. 

 • News18 Kannada
 • 2-MIN READ
 • Last Updated :
 • Karnataka, India
 • Share this:

2nd PUC Exam Time Table 2023 Karnataka: ನಾಳೆಯಿಂದ ಅಂದರೆ ಮಾರ್ಚ್ 9 ರಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ(2nd PUC Exam) ಆರಂಭವಾಗಲಿದ್ದು, ಪಿಯು ಬೋರ್ಡ್​ (PU Board) ಸಕಲ ಸಿದ್ಧತೆ ಮಾಡಿಕೊಂಡಿದೆ. ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಯಾವುದೇ ಊಹಾಪೋಹ, ವದಂತಿಗಳಿಗೆ ಕಿವಿಗೊಡದಂತೆ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ (Students) ಮತ್ತು ಪೋಷಕರಿಗೆ ಮನವಿ ಮಾಡಿದೆ. 


ಈ ಷರತ್ತು ಅನ್ವಯ:


ಪಿಯು ಬೋರ್ಡ್​ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿಲ್ಲ. ಒಟ್ಟು 7.27 ಲಕ್ಷ ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ. 5,716 ಕಾಲೇಜುಗಳಿಂದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಿದ್ಧರಾಗಿದ್ದಾರೆ.  ರಾಜ್ಯದಲ್ಲಿ ಒಟ್ಟು 1,109 ಪರೀಕ್ಷಾ ಕೇಂದ್ರಗಳನ್ನ ಗುರುತಿಸಲಾಗಿದೆ.


ಉಚಿತ ಪ್ರಯಾಣ


ನಾಳೆ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಬಿಎಂಟಿಸಿ ಬಸ್​​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.


ಮಾರ್ಚ್​ 9- 29 ರವರೆಗೆ ಪರೀಕ್ಷೆ


ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 9, 2023 ರಿಂದ ಮಾರ್ಚ್ 29, 2023 ರವರೆಗೆ ನಡೆಯಲಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ತಮ್ಮ ಪರೀಕ್ಷಾ ಕೇಂದ್ರಗಳಿಗೆ ತಮ್ಮ ಹಾಲ್ ಟಿಕೆಟ್‌ಗಳನ್ನು ಕೊಂಡೊಯ್ಯಬೇಕು.


ದ್ವಿತೀಯ ಪಿಯು ಪರೀಕ್ಷೆಗೆ ಕೈಗೊಂಡಿರುವ ಭದ್ರತಾ ಕ್ರಮಗಳೇನು?


-ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್


-ಸಿಸಿ ಕ್ಯಾಮೆರಾ ಕಣ್ಗಾವಲು, ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳು ಪರೀಕ್ಷೆ ಅವಧಿಯಲ್ಲಿ ಬಂದ್


-ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್, ಗೇಮ್ಸ್ ಕೇಂದ್ರಗಳ ಮೇಲೆ ವಿಶೇಷ ನಿಗಾ


-ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ


-ಶಂಕಿತ ವ್ಯಕ್ತಿಗಳ ಮೇಲೆ ವಿಶೇಷ ನಿಗಾ


-ಹಿಂದಿನ ವರ್ಷಗಳಲ್ಲಿ ಪರೀಕ್ಷಾ ಅಕ್ರಮ ವರದಿಯಾಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ನಿಗಾ


-ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳ ನಿಷೇಧ


-ವಿದ್ಯಾರ್ಥಿಗಳು ಸಮಯ ನೋಡಿಕೊಳ್ಳಲು ಗೋಡೆ ಗಡಿಯಾರದ ವ್ಯವಸ್ಥೆ


-ವದಂತಿಗಳನ್ನು ಹಬ್ಬಿಸುವ ಕಿಡಿಗೇಡಿಗಳ ಮೇಲೆ ಸೈಬರ್ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಇನ್ನಿತರ ತಂಡಗಳು ವಿಶೇಷ ನಿಗಾ


-ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳಲ್ಲಿ 24/7 ಪೊಲೀಸ್ ಭದ್ರತೆ


-ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕಾರ್ಯ ಮತ್ತು ಪರೀಕ್ಷಾ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮೊಬೈಲ್ ಫೋನ್ ಬಳಕೆ ನಿಷೇಧ


-ಪರೀಕ್ಷಾ ಕೇಂದ್ರದ ಅಧೀಕ್ಷಕರು ಮಾತ್ರ ಕ್ಯಾಮೆರಾ ಸೌಲಭ್ಯ ಇಲ್ಲದ ಬೆಸಿಕ್ ಮೊಬೈಲ್‌ಫೋನ್ ಬಳಕೆಗೆ ಅನುಮತಿ.ಬಿಎಂಟಿಸಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ:


ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ- ಬಿಎಂಟಿಸಿ ವಿದ್ಯಾರ್ಥಿಗಳನ್ನು ಕರೆದೊಯ್ಯಲು ಉಚಿತ ಬಸ್ ಸೇವೆಯನ್ನು ನೀಡುವುದಾಗಿ ಘೋಷಿಸಿದೆ. ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ಆಯಾ ಕಾಲೇಜುಗಳಿಗೆ ಪ್ರಯಾಣಿಸಲು ಬಿಎಂಟಿಸಿ ಬಸ್​​ಗಳನ್ನು ಹತ್ತಬಹುದು. ಜೊತೆಗೆ ಬಿಎಂಟಿಸಿ ಉಚಿತ ಮತ್ತು ರಿಯಾಯಿತಿ ಪಾಸ್‌ಗಳನ್ನು ನೀಡಲಿದೆ. ವಿದ್ಯಾರ್ಥಿಗಳು ತಮ್ಮ ಪಿಯುಸಿ ಹಾಲ್ ಟಿಕೆಟ್‌ಗಳನ್ನು ತೋರಿಸುವ ಮೂಲಕ ಈ ಉಚಿತ ಪಾಸ್‌ಗಳನ್ನು ಪಡೆಯಬಹುದು. ಪರೀಕ್ಷೆಯ ಎಲ್ಲಾ ದಿನಗಳಲ್ಲಿ ಈ ಬಸ್ ಸೇವೆಗಳು ಲಭ್ಯವಿರುತ್ತವೆ ಎಂದು ಸಾರಿಗೆ ನಿಗಮ ತಿಳಿಸಿದೆ.

Published by:Latha CG
First published: