ಇನ್ನೇನು ಕೆಲವೇ ತಿಂಗಳಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು ಹಲವಾರು ವಿದ್ಯಾರ್ಥಿಗಳು (Students) ಈಗಾಗಲೇ ತಯಾರಿ ನಡೆಸುತ್ತಿದ್ದಾರೆ. ಮಾದರಿ ಪ್ರಶ್ನೆ ಪತ್ರಿಕೆ ಲಭಿಸಿದರೆ ವಿದ್ಯಾರ್ಥಿಗಳ ಪರೀಕ್ಷಾ (Exam) ಸಿದ್ಧತೆಗೆ ತುಂಬಾ ಸಹಾಯವಾಗುತ್ತದೆ ಎಂಬ ನಿಟ್ಟಿನಲ್ಲಿ ಪರೀಕ್ಷಾ ಮಂಡಳಿಯು ಮಾದರಿ ಪ್ರಶ್ನೆ ಪತ್ರಿಕೆಗಳನ್ನು (Question Paper) ಬಿಡಿಗಡೆ ಮಾಡಿದೆ ಇದರ ಅನ್ವಯ ವಿದ್ಯಾರ್ಥಿಗಳು ಅಭ್ಯಾಸ ಮಾಡಬಹುದು. ಅಧಿಕೃತ ಲಿಂಕ್ (Link) ಇಲ್ಲಿ ನೀಡಲಾಗಿದೆ. ಇದನ್ನು ಕ್ಲಿಕ್ ಮಾಡುವ ಮೂಲಕ ನೀವು ಮಾದರಿ ಪ್ರಶ್ನೆ ಪತ್ರಿಕೆಯನ್ನು ಪಡೆಯಬಹುದು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2023ರ ಮಾರ್ಚ್ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆಪತ್ರಿಕೆಯನ್ನು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. 10 ಅಂಕಗಳಿಗೆ ಬಹು ಆಯ್ಕೆ ಮಾದರಿ (MCQ) ಪ್ರಶ್ನೆಪತ್ರಿಕೆ ನೀಡಿದೆ.
ಮಾರ್ಚ್ನಲ್ಲಿ ನಡೆಯಲಿರುವ ಪರೀಕ್ಷೆಗೆ ಇದು ತುಂಬಾ ಸಹಾಯವಾಗಲಿದ್ದು ಈ ಬಾರಿ ಬಹು ಆಯ್ಕೆಯ ಪ್ರಶ್ನೆಗಳೂ ಸಹ ಪ್ರಶ್ನೆ ಪತ್ರಿಕೆಯಲ್ಲಿ ಇರಲಿವೆ. ಯಾವ ಮಾದರಿಯಲ್ಲಿ ಎಷ್ಟು ಅಂಕಗಳಲ್ಲಿ ಪ್ರಶ್ನೆ ಬರುತ್ತದೆ ಎನ್ನುವ ಕುರಿತು ಇಲ್ಲಿ ಸರಿಯಾದ ರೀತಿಯ ಮಾದರಿಯನ್ನು ನೀಡಲಾಗಿದೆ.
ಇದನ್ನೂ ಓದಿ: RPSC Paper Leak: ಶಿಕ್ಷಕರ ನೇಮಕಾತಿ ಪರೀಕ್ಷೆ ಪೇಪರ್ ಲೀಕ್, 44 ಜನರ ಬಂಧನ!
ಇದೇ ಮೊದಲ ಬಾರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧರಾಗಲು ಅನುಕೂಲವಾಗಲೆಂಬ ಉದ್ದೇಶದಿಂದ ಮಾದರಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದೆ.ಅನುತ್ತೀರ್ಣರಾಗುವ ವಿದ್ಯಾರ್ಥಿಗಳು ಸುಲಭವಾಗಿ ಉತ್ತೀರ್ಣರಾಗುವಂತೆ ಮಾಡುವ ಉದ್ದೇಶದಿಂದ ಪ್ರಶ್ನೆಪತ್ರಿಕೆ ಮಾದರಿಯನ್ನು ಬದಲಾಯಿಸಲಾಗಿದೆ ಎಂದು ಹೇಳಿದ್ದಾರೆ. ಬಹು ಆಯ್ಕೆ ಪ್ರಶ್ನೆಗಳಿದ್ದರೆ ಹೆಚ್ಚು ಅಂಕ ತೆಗೆಯಲು ಸಾಧ್ಯವಾಗುತ್ತದೆ. ಆ ಕಾರಣದಿಂದ ಈ ಮಾದರಿಯನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ
ಇಲ್ಲಿ ಕ್ಲಿಕ್ ಮಾಡಿ ನೀವು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸಿ. ಪ್ರತಿಯೊಂದು ವಿಷಯದ ಮಾದರಿ ಪ್ರಶ್ನೆ ಲಭ್ಯವಿದ್ದು ನೀವು ಎಲ್ಲಾ ವಿಷಯದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಸೇವ್ ಮಾಡಿಕೊಳ್ಳಬಹುದು. ಒಟ್ಟಾರೆ 100 ಅಂಕಗಳ ಪ್ರಶ್ನೆಪತ್ರಿಕೆಯಾಗಿದ್ದು, 10 ಅಂಕಗಳಿಗೆ MCQ, ಐದು ಅಂಕಗಳಿಗೆ ಹೊಂದಿಸಿ ಬರೆಯಿರಿ, ಐದು ಅಂಕಗಳಿಗೆ ಬಿಟ್ಟ ಸ್ಥಳ ತುಂಬಿರಿ ನೀಡಲಾಗಿದೆ. ಕನಿಷ್ಠ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಈ ಮಾದರಿ ಸಹಕಾರಿಯಾಗಲಿದೆ ಎಂಬುದು ಮಂಡಳಿಯ ಉದ್ದೇಶವಾಗಿದೆ.
ಪ್ರಶ್ನೆಗಳ ಮಾದರಿ ಹೀಗಿದೆ
ವಿವಿಧ ವಿಭಾಗದಲ್ಲಿ ಕ್ರಮವಾಗಿ 2 ಅಂಕದ 11 ಪ್ರಶ್ನೆಗಳನ್ನು ನೀಡಿದೆ. 3 ಅಂಕದ 4 ಪ್ರಶ್ನೆಗಳು, 4 ಅಂಕದ 6 ಪ್ರಶ್ನೆಗಳು, 5 ಮತ್ತು 6 ಅಂಕದ 2 ಪ್ರಶ್ನೆಗಳನ್ನು ನೀಡಲಾಗಿದೆ. ಒಟ್ಟಾರೆ 80 ಅಂಕಗಳಿಗೆ ವಿಸ್ತ್ರತವಾಗಿ ವಾಕ್ಯ ರೂಪದಲ್ಲಿ ಉತ್ತರಿಸುವ ಪ್ರಶ್ನೆಗಳಿವೆ. ಇದರಲ್ಲಿ ಸಂದಂರ್ಭ ಸೂಚಿಸಿ ಬರೆಯುವುದು, ಸ್ವಾರಸ್ಯ ರೂಪದಲ್ಲಿ ಉತ್ತರ, ಪದ್ಯದ ಭಾವಾರ್ಥ, ಭಾಷಾಭ್ಯಾಸ, ಪ್ರಬಂಧ, ಪತ್ರಲೇಖನ ಮತ್ತು ಗಾದೆ ಮಾತು ವಿಸ್ತರಿಸಿ ಬರೆಯುವ ಪ್ರಶ್ನೆಗಳನ್ನು ನೀಡಲಿದೆ.
ಇನ್ನೂ ದ್ವಿತೀಯ ಪಿಯುಸಿ ಫಲಿತಾಂಶ ಹೆಚ್ಚಳ ಮಾಡುವುದಕ್ಕಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಕೇರಳ, ತಮಿಳುನಾಡು, ದೆಹಲಿ ಸೇರಿ ಇತರೆ ರಾಜ್ಯಗಳ ಪರೀಕ್ಷಾ ಮಾದರಿಯನ್ನು ಅಧ್ಯಯನ ನಡೆಸಿದೆ. ಈ ಬಾರಿ ಫಲಿತಾಂಶವನ್ನು ಕಾದು ನೋಡಬೇಕಿದೆ. ಈ ವರ್ಷದ ಶೈಕ್ಷಣಿಕ ಪ್ರಗತಿಯನ್ನು ಶಿಕ್ಷಣ ಇಲಾಖೆ ಬಯಸುತ್ತಿದೆ. ಅಧ್ಯಯನ ಮಾಡಿದ ಮಾದರಿಗಳ ವರದಿಯನ್ನು ಸರ್ಕಾರಕ್ಕೆ ನೀಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ