ಚಿಕ್ಕಬಳ್ಳಾಪುರ: ಬಯಲುಸೀಮೆಯ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಭಾಗಕ್ಕೆ ವೈದ್ಯಕೀಯ ಕಾಲೇಜು (College) ಬಂದಿರುವುದು ಖುಷಿಯ ವಿಷಯ. ಇದರಿಂದಾಗಿ ಹಲವಾರು ವಿದ್ಯಾರ್ಥಿಗಳಿಗೆ ಸಹಾಯವಾಗಲಿದೆ. ಈ ನಿಟ್ಟಿನಲ್ಲಿ ಇದೇ ತಿಂಗಳು ಅಂದರೆ ಮಾರ್ಚ್ 25 ರಂದು ನರೇಂದ್ರ ಮೋದಿ (Narendra Modi) ಅವರು ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಮುದ್ದೇನಹಳ್ಳಿಯಲ್ಲಿರುವ ಸತ್ಯಸಾಯಿ ಕಾಲೇಜಿನ ಉದ್ಘಾಟನೆ ಮಾಡಿದ್ದಾರೆ. ಸತ್ಯಸಾಯಿ ಕಾಲೇಜು (Satya Sai College) ಮತ್ತು ನಂದಿ ಕಾಲೇಜು ಎರಡೂ ವೈದ್ಯಕೀಯ ಕಾಲೇಜುಗಳು ಕರ್ನಾಟಕದಲ್ಲಾಗಿರುವುದರಿಂದ (Karnataka) ವಿದ್ಯಾರ್ಥಿಗಳಿಗೆ ತುಂಬಾ ಸಹಾಯವಾಗಲಿದೆ. ಸಿ ಎಂ ಬಸವರಾಜ ಬೊಮ್ಮಾಯಿ ಕಾಲೇಜು ಉದ್ಘಾಟನೆ ಮಾಡಿದ್ದಾರೆ.
ಸಾರ್ವಜನಿಕ ವೇದಿಕೆ ಕಾರ್ಯಕ್ರಮದಲ್ಲಿ ಡಾ.ಸುಧಾಕರ್ ಹೇಳಿಕೆ ನೀಡಿದ್ದಾರೆ. ಬಯಲುಸೀಮೆಯ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಭಾಗಕ್ಕೆ ವೈದ್ಯಕೀಯ ಕಾಲೇಜು ಬಂದಿರುವುದು ಖುಷಿಯ ವಿಷಯ ಎಂದು ತಿಳಿಸಿದ್ದಾರೆ. ಸತ್ಯಸಾಯಿ ಕಾಲೇಜು ಮತ್ತು ನಂದಿ ಕಾಲೇಜು ಎರಡೂ ವೈದ್ಯಕೀಯ ಕಾಲೇಜುಗಳು ಬಂದಿರುವುದು ನಮ್ಮ ಸೌಭಾಗ್ಯ ಎಂದು ಹೇಳಿದ್ದಾರೆ.
ಹೃದಯ ಸಂಬಂಧಿ ಸೇರಿದಂತೆ ಎಲ್ಲಾ ಕಾಯಿಲೆಗಳಿಗೂ ಚಿಕಿತ್ಸೆ ದೊರೆಯುವ ಸೌಲಭ್ಯ ನಮ್ಮಲ್ಲಿ ಸಿಗುತ್ತಿದೆ. ಬೆಂಗಳೂರು ಗ್ರಾಮಾಂತರದ ಎಲ್ಲಾ ತಾಲೂಕುಗಳಿಗೂ ವೈದ್ಯಕೀಯ ಸೇವೆ ಸಿಗಲಿದೆ ಎಂದು ಹೇಳಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗಷ್ಟೆ ಅಲ್ಲಾ ಅಲ್ಲಿನ ಜನರಿಗೂ ಸಹಾಯವಾಗಲಿದೆ.
ಇದನ್ನೂ ಓದಿ: Public Exam: ರಾಜ್ಯದಲ್ಲಿ ಇಂದಿನಿಂದ 5 ಹಾಗೂ 8ನೇ ತರಗತಿ ಪರೀಕ್ಷೆ ಆರಂಭ
ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಸರ್ಕಾರ ಡಬಲ್ ಇಂಜಿನ್ ಸರ್ಕಾರ. ಕರೋನಾದಂತಹ ಸಾಂಕ್ರಾಮಿಕ ರೋಗವನ್ನು ಎದುರಿಸಿದ್ದೇವೆ. ಮುಂದಿನ ದಿನದಲ್ಲಿ ಯಾವುದೇ ತೊಂದರೆ ಬಂದರೂ ನಾವು ಈಗ ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ. ಕಾಲೇಜು ಚಿಕ್ಕಬಳ್ಳಾಪುರಕ್ಕೆ ಬರಲು ಯಡಿಯೂರಪ್ಪನವರ ಸಹಕಾರ ಹೆಚ್ಚಿದೆ ಎಂದು ಆ ಸಂದರ್ಭದಲ್ಲಿ ಯಡಿಯೂರಪ್ಪ ಅವರನ್ನು ಸ್ಮರಿಸಿದ್ದಾರೆ. ಜಿಲ್ಲೆಯ ಜನರ ಪರವಾಗಿ ನಾನು ಯಡಿಯೂರಪ್ಪ ಮತ್ತು ಸರ್ಕಾರಕ್ಜೆ ಧನ್ಯವಾದ ಅರ್ಪಿಸುತ್ತೇನೆ ಎಂದು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಕಾಮಗಾರಿಗಳ ಶಂಕುಸ್ಥಾಪನೆ ಕೂಡಾ ನೆರವೇರಿದೆ
ಈ ವೈದ್ಯಕೀಯ ಕಾಲೇಜು 57.24 ಹೆಕ್ಟೇರ್ ಪ್ರದೇಶದಲ್ಲಿ ನಿರ್ಮಾಣವಾಗಿದ್ದು, ಇಂದು ಇದರ ಉದ್ಘಾನೆಯಾಗಿದೆ. ಆಯುಷ್ಮತಿ ಕ್ಲಿನಿಕ್, ನಮ್ಮ ಕ್ಲಿನಿಕ್, ಕಾಕ್ಲಿಯರ್ ಇಂಪ್ಲಾಟ್ ಯೋಜನೆ, ಡಯಾಲಿಸಿಸ್ ಹೊಸ ಸೇವೆಗಳ ಲೋಕಾರ್ಪಣೆ, ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಕೂಡಾ ನೆರವೇರಿದೆ.
ಅರೂರಿನಲ್ಲಿ ಇಂದು ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ 810 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಕಟ್ಟಡದ ಉದ್ಘಾಟನೆ ಎರಡೂ ಕೂಡಾ ಜರುಗಿದೆ.
ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆ
ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆಗೆ ಆಗಮಿಸಿದ ಸಿಎಂ. ಈ ಕುರಿತು ಹರ್ಷ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ಇರೋ ನೂತನ ನಂದಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಿದೆ. ಬಹು ನಿರೀಕ್ಷಿತ ನಂದಿ ವೈದ್ಯಕೀಯ ಕಾಲೇಜು ಉದ್ಘಾಟಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಕಾಲೇಜು ಉದ್ದೇಶಿಸಿ ಮಾತನಾಡಿದ್ದಾರೆ.
ಸಿಎಂಗೆ ಸಚಿವ ಡಾ.ಕೆಸುಧಾಕರ್, ಆರ್ ಅಶೋಕ್ ಹಾಗೂ ಎಂಟಿಬಿ ನಾಗರಾಜ್ ಸೇರಿದಂತೆ ಜಿಲ್ಲಾಡಳಿತ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಸುಮಾರು 810 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರೋ ವೈದ್ಯಕೀಯ ಕಾಲೇಜು ಇದಾಗಿದ್ದು ಇನ್ನಷ್ಟು ಕಾಮಗಾರಿ ಬಾಕಿ ಇದ್ದರು, ಚುನಾವಣೆ ಸಮೀಪ ಹಿನ್ನಲೆ ಇಂದು ಉದ್ಘಾಟನೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಅರೂರು ಗ್ರಾಮದಲ್ಲಿ ಇದನ್ನು ಸ್ಥಾಪಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ