ದ್ವಿತೀಯ ಪಿಯುಸಿ ಪರೀಕ್ಷೆ (Exam) ಮುಕ್ತಾಯ ನಂತ್ರ ಇದೀಗ SSLC ಪರೀಕ್ಷೆಗೆ ಕೌಂಟ್ ಡೌನ್ ಆರಂಭವಾಗಿದೆ. ನಾಳೆಯಿಂದಲೇ ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಆರಂಭವಾಗಲಿದೆ. ಈ ಪರೀಕ್ಷೆಗೆ ವಿದ್ಯಾರ್ಥಿಗಳು ಬರದಿಂದ ತಯಾರಿ ನಡೆಸುತ್ತಿದ್ದಾರೆ. ನಾಳೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು (Students) ಕಾತುರರಾಗಿದ್ದಾರೆ. ಈ ನಡುವೆ ವಿದ್ಯಾರ್ಥಿಗಳೆಲ್ಲಾ ಒಮ್ಮೆ ಸರಿಯಾಗಿ ಈ ಕೆಳಗಿನ ಅಂಶಗಳನ್ನು ಗಮನಿಸಲೇ ಬೇಕು. ಯಾವ ದಿನ ಯಾವ ಪರೀಕ್ಷೆ? ಪರೀಕ್ಷಾ ಕೇಂದ್ರಕ್ಕೆ (Exam Hall) ತೆರಳುವ ಮುನ್ನ ಯಾವ ರೀತಿ ತಯಾರಿ ನಡೆಸಬೇಕು ಎಂಬ ಮಾಹಿತಿ ಇಲ್ಲಿದೆ ಗಮನಿಸಿ.
ನಾಳೆಯಿಂದ- ಏಪ್ರಿಲ್ 15ವರೆಗೆ SSLC ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳು ಹಾಗೂ ಪಾಲಕರು ತಿಳಿಯಲೇ ಬೇಕಾದ ಕೆಲವು ನಿಯಮಗಳನ್ನು ಇಲ್ಲಿ ನೀಡಲಾಗಿದೆ. ದಯವಿಟ್ಟು ಗಮನಿಸಿ. ಶಿಕ್ಷಣ ಇಲಾಖೆಯಿಂದ ಪರೀಕ್ಷೆಗೆ ಸಕಲ ಸಿದ್ಧತೆ ಜರುಗುತ್ತಿದೆ. ಒಟ್ಟು 8,42,811 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು ನಾಳೆ ಇವಿಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳು ಸ್ಥಾಪನೆಯಾಗಿದೆ. ಈ ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಕಟ್ಟು ನಿಟ್ಟಿನ ಪರೀಕ್ಷೆ ನಡೆಯಲಿದೆ.
ಇದನ್ನೂ ಓದಿ: Education: ದೇಶದಾದ್ಯಂತ 9 ಸಾವಿರ ಶಾಲೆಗಳಲ್ಲಿ ಆರಂಭವಾಗಲಿದೆ PM SHRI ಯೋಜನೆ!
ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ವಿವರ ಈ ಕೆಳಗಿನಂತಿದೆ.
-ಶಾಲಾ ವಿದ್ಯಾರ್ಥಿಗಳು:- 7,94,611
-ಪುನರಾವರ್ತಿತ ವಿದ್ಯಾರ್ಥಿಗಳು
-20,750
-ಖಾಸಗಿ ಅಭ್ಯರ್ಥಿಗಳು- 18,272
-ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು:- 8,859
ಈ ರೀತಿಯಾಗಿ ಇಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
2010 ಕ್ಕಿಂತ ಹಿಂದಿನ ಸಾಲಿನ ಪುನರಾವರ್ತಿತ ಅಭ್ಯರ್ಥಿಗಳು 301 ಜನ ಇದ್ದಾರೆ ಅವರಿಗೂ ಸಹ ಈ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. 2010 ಕ್ಕಿಂತ ಹಿಂದಿನ ಸಾಲಿನ ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು 15ಜನ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ಭದ್ರತಾ ದೃಷ್ಟಿಯಿಂದ ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸಿಸಿ ಕ್ಯಾಮೆರಾ ಕಣ್ಗಾವಲು, ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆಯ ಅವಧಿಯಲ್ಲಿ ಬಂದ್ ಮಾಡಲಾಗಿದೆ. ಒಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ಧತೆಗಳು ಜರುಗಿದ್ದು ವಿದ್ಯಾರ್ಥಿಗಳು ನಿರ್ಭಯದಿಂದ ಪರೀಕ್ಷೆ ಬರೆಯಬಹುದು.
ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶ ಇದು
ವಿದ್ಯಾರ್ಥಿಗಳು ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧ ಮಾಡಲಾಗಿದೆ.
ಪರೀಕ್ಷಾ ವೇಳಾಪಟ್ಟಿ.
31-03-2023 - ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ.
04-04-2023 -ಗಣಿತ ಶಾಸ್ತ್ರ, ಸಮಾಜ ಶಾಸ್ತ್ರ.
06-04-2023- ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ.
10-04-2023- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ.
12-04-2023- ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ
15-04-2023 - ಸಮಾಜ ವಿಜ್ಞಾನ
ಪರೀಕ್ಷಾ ಸಿದ್ಧತೆ ನಡೆಸಿದ ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಪರೀಕ್ಷೆ ಬರೆದು ಉತ್ತೀರ್ಣರಾಗುವ ಪ್ರಯತ್ನ ಮಾಡಬೇಕು. ನಕಲು ಮಾಡುವುದು ಕಾಪಿ ಚೀಟಿ ತರುವ ಕೆಲಸ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯವೇ ಹಾಳಾಗುತ್ತದೆ ಈ ಕುರಿತು ಗಮನಹರಿಸಿ ನ್ಯಾಯಯುತವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು. ಯಾವುದೇ ಅನುಮಾನಗಳಿದ್ದಲ್ಲಿ ಹತ್ತನೇ ತರಗತಿ ಸಹಾಯವಾಣಿ ಸಂಖ್ಯೆಯನ್ನು ನೀವು ಸಂಪರ್ಕಿಸಬಹುದು. - 080- 23310075 ಈ ನಂಬರ್ಗೆ ಕರೆ ಮಾಡಿ ನಿಮ್ಮ ಅನುಮಾನಗಳಿದ್ದಲ್ಲಿ ಮಾತನಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ